ಬೆಂಗಳೂರು: ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಜೈರಾಂ ರಮೇಶ್ ಆಯ್ಕೆಯಾಗಿದ್ದಾರೆ. ಮೇ 31ರಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದ್ದು, ಒಂದು ದಿನ ಮುಂಚಿತವಾಗಿಯೇ ಅವರು ನಾಮಪತ್ರ ಸಲ್ಲಿಸುವರು.
ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಶಾಸಕ ಬಲದ ಆಧಾರದ ಮೇಲೆ ಒಬ್ಬ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳುವ ಬಲ ಹೊಂದಿದೆ. 2016ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಜೈರಾಂ ರಮೇಶ್, ಆಸ್ಕರ್ ಫರ್ನಾಂಡಿಸ್ ಹಾಗೂ ಕೆ.ಸಿ.ರಾಮಮೂರ್ತಿ ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದರು.
ರಾಮಮೂರ್ತಿ ಮಧ್ಯದಲ್ಲಿಯೇ ಕಾಂಗ್ರೆಸ್ಗೆ ರಾಜೀನಾಮೆ ನೀಡಿ ಬಿಜೆಪಿಯಿಂದ ಅಭ್ಯರ್ಥಿಯಾಗಿ ನಿಂತು ಗೆಲುವು ಸಾಧಿಸಿದ್ದಾರೆ. ಆಸ್ಕರ್ ಫರ್ನಾಂಡಿಸ್ ನಿಧನರಾಗಿದ್ದು, ಏಕೈಕ ಆಯ್ಕೆಗೆ ಜೈರಾಮ್ ರಮೇಶ್ ಸುಗಮ ಆಯ್ಕೆಯಾಗಿ ಪರಿಗಣಿಸಲ್ಪಟ್ಟಿದ್ದಾರೆ. ದೆಹಲಿಗೆ ರಾಜ್ಯನಾಯಕರು ತೆರಳುವ ಮುನ್ನ ಆಸ್ಕರ್ ಫರ್ನಾಂಡಿಸ್ ಕುಟುಂಬದ ಸದಸ್ಯರ ಹೆಸರು ಕೇಳಿ ಬಂದಿತ್ತು.
ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಜೈರಾಂ ರಮೇಶ್ ಉಳಿದಂತೆ, ಮಾಜಿ ಸಚಿವ ಎಸ್.ಆರ್.ಪಾಟೀಲ್ ಹಾಗೂ ಮಾಜಿ ಸಂಸದ ಮುದ್ದಹನುಮೇಗೌಡ ಹೆಸರುಗಳು ಕೇಳಿ ಬಂದಿದ್ದವು. ಆದರೆ, ದೆಹಲಿಯಿಂದ ವಾಪಸ್ ಆದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇರುವ ಏಕೈಕ ಸ್ಥಾನಕ್ಕೆ ಜಯರಾಂ ರಮೇಶ್ ಅವರೇ ಅಭ್ಯರ್ಥಿಯಾಗಲಿದ್ದಾರೆ. ಅವರ ಹೆಸರನ್ನು ಹೈಕಮಾಂಡ್ ಅಂತಿಮ ಮಾಡಿದೆ ಎಂದು ತಿಳಿಸಿದ್ದರು. ಈ ಸಂಬಂಧ ಗುರುವಾರ ಬೆಂಗಳೂರಿಗೆ ಆಗಮಿಸಿರುವ ಜಯರಾಂ ರಮೇಶ್ ನಗರದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಸಭೆ: ಮೇ 30 ರಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಜೈರಾಂ ರಮೇಶ್ ನಾಮಪತ್ರ ಸಲ್ಲಿಕೆ ಮಾಡಲಿದ್ದು ಒಂದು ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೂಚನೆ ಮೇರೆಗೆ ಶಾಸಕಾಂಗ ಸಭೆ ನಡೆಯಲಿದೆ ಎಂದು ಶಾಸಕಾಂಗ ಪಕ್ಷದ ಕಾರ್ಯದರ್ಶಿ ಈ ತುಕಾರಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಲಿದೆ. ಎಲ್ಲರೂ ಸಕಾಲಕ್ಕೆ ಹಾಜರಿರುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸಭೆ ಬಳಿಕ ನಾಯಕರೆಲ್ಲ ಒಟ್ಟಾಗಿ ತೆರಳಿ ಜೈರಾಂ ರಮೇಶ್ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಇದನ್ನೂ ಓದಿ:ವಿಜಯೇಂದ್ರಗೆ ಕೈತಪ್ಪಿದ ಎಂಎಲ್ಸಿ ಟಿಕೆಟ್; ಈಡೇರದ ಸಚಿವ ಸ್ಥಾನದ ಕನಸು