ಬೆಂಗಳೂರು: ಕಾಶ್ಮೀರ ಕಣಿವೆಯಲ್ಲಿ ಉಗ್ರರು ಗುಂಡಿನ ದಾಳಿ, ಕಲ್ಲು ತೂರಾಟ ನಡೆಸಿ ಹಿಂಸಾಚಾರಕ್ಕೆ ಎಡೆ ಮಾಡಿಕೊಡುತ್ತಿದ್ದಾರೆ. ಈ ಬೆಳವಣಿಗೆ ನಡುವೆಯೇ ನಗರದಲ್ಲಿ ತಲೆಮರೆಸಿಕೊಂಡಿದ್ದ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದ ಎನ್ನಲಾದಶಂಕಿತ ಆರೋಪಿಯನ್ನು ಜಮ್ಮು ಕಾಶ್ಮೀರ ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ.
ಜಮ್ಮು ಮೂಲದ ತಾಲಿಬ್ ಹುಸೇನ್ನನ್ನು ಕೆಲ ದಿನಗಳ ಹಿಂದೆ ಜಮ್ಮುಕಾಶ್ಮೀರ ಪೊಲೀಸರು ಬೆಂಗಳೂರಿಗೆ ಬಂದು ಪತ್ತೆ ಹಚ್ಚಿ ವಶಕ್ಕೆ ಪಡೆದುಕೊಂಡಿದ್ದಾರೆ. ಕಳೆದ ಎರಡು ವರ್ಷಗಳಿಂದ ನಗರದ ಶ್ರೀರಾಮಪುರದಲ್ಲಿ ವಾಸವಾಗಿದ್ದ ಹುಸೇನ್ನನ್ನು ಜಮ್ಮುವಿನ ಕಿಸ್ತವಾರ್ ಠಾಣೆ ಪೊಲೀಸರು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ.