ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ (Former Minister Gali Janardhana Reddy) ಅವರು ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳಗ್ಗೆ ಆರೋಗ್ಯದಲ್ಲಿ ಏರುಪೇರು ಉಂಟಾದ ಕಾರಣ ಅವರನ್ನ ನಗರದ ಆಸ್ಟರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಾಜಿ ಸಚಿವ ಜನಾರ್ದನ ರೆಡ್ಡಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು..! - janardhana reddy hospitalized due to illness
ಬೆಳಗ್ಗೆ ಆರೋಗ್ಯದಲ್ಲಿಏರುಪೇರು ಉಂಟಾದ ಕಾರಣ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರನ್ನು ಬೆಂಗಳೂರಿನ ಆಸ್ಟರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
Gali Janardhana Reddy
ಪ್ರಾಥಮಿಕ ಆರೋಗ್ಯ ತಪಾಸಣೆ ನಂತರ ಆ್ಯಸಿಡಿಟಿ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದು, ಇತರ ತಪಾಸಣೆಗಳನ್ನು ನಡೆಸಿದ್ದಾರೆ. ಸದ್ಯ ಯಾವುದೇ ತೊಂದರೆ ಇಲ್ಲ, ಸಂಜೆ ವೇಳೆಗೆ ಆಸ್ಪತ್ರೆಯಿಂದ ಜನಾರ್ದನ ರೆಡ್ಡಿ ಅವರನ್ನು ಆಸ್ಪತ್ರೆಯಿಂದ ಡಿಸ್ಟಾರ್ಜ್ ಮಾಡುವುದಾಗಿ ವೈದ್ಯರು ಮಾಹಿತಿ ನೀಡಿದ್ದಾರೆ ಎಂದು ರೆಡ್ಡಿ ಕುಟುಂಬ ಮೂಲಗಳು ತಿಳಿಸಿವೆ.