ಕರ್ನಾಟಕ

karnataka

ETV Bharat / city

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ವಂತ್ ಸಿಂಗ್ ನೇಮಕ ಸಾಧ್ಯತೆ - Karnataka High Court CJ

ಹೈಕೋರ್ಟ್​​ನ ಮುಖ್ಯ ನ್ಯಾಯಮೂರ್ತಿಯಾಗಿ ಒಡಿಶಾ ಹೈಕೋರ್ಟ್​​ನ ಹಿರಿಯ ನ್ಯಾಯಮೂರ್ತಿ ಜಸ್ವಂತ್ ಸಿಂಗ್ ಅವರು ನೇಮಕಗೊಳ್ಳಲಿದ್ದಾರೆ ಎನ್ನಲಾಗಿದೆ.

Jaswant Singh likely to be appointed as Chief Justice of the High Court
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ವಂತ್ ಸಿಂಗ್ ನೇಮಕ ಸಾಧ್ಯತೆ

By

Published : May 13, 2022, 5:43 PM IST

ಬೆಂಗಳೂರು: ರಾಜ್ಯ ಹೈಕೋರ್ಟ್​​ನ ಮುಖ್ಯ ನ್ಯಾಯಮೂರ್ತಿಯಾಗಿ ಒಡಿಶಾ ಹೈಕೋರ್ಟ್​​ನ ಹಿರಿಯ ನ್ಯಾಯಮೂರ್ತಿ ಜಸ್ವಂತ್ ಸಿಂಗ್ ಅವರು ನೇಮಕಗೊಳ್ಳಲಿದ್ದಾರೆ ಎನ್ನಲಾಗಿದೆ. ರಾಜ್ಯ ಹೈಕೋರ್ಟ್​​ ಹಾಲಿ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರು ಇದೇ ಜುಲೈ 2ರಂದು ನಿವೃತ್ತಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಜಸ್ವಂತ್ ಸಿಂಗ್ ಅವರನ್ನು ಕರ್ನಾಟಕ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ನಿಯೋಜಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಹಿನ್ನೆಲೆ: ನ್ಯಾ. ಜಸ್ವಂತ್ ಸಿಂಗ್ ಅವರು 1961ರ ಫೆಬ್ರವರಿ 23ರಂದು ಹರಿಯಾಣ ರಾಜ್ಯದ ರೋಹ್ಟಕ್ ಜಿಲ್ಲೆಯಲ್ಲಿ ಜನಿಸಿದರು. ಸ್ಥಳೀಯ ಓಕ್ ಗ್ರೋವ್, ಝರಿಪಾನಿ, ಮಸ್ಸೂರಿ ಮಾಡಲ್ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣ ಹಾಗೂ 1980ರಲ್ಲಿ ಕಲಾ ವಿಷಯದಲ್ಲಿ ಪದವಿ ಪಡೆದಿದ್ದಾರೆ. ಬಳಿಕ ರೋಹ್ಟಕ್​ನ ಮಹರ್ಷಿ ದಯಾನಂದ ವಿಶ್ವವಿದ್ಯಾಲಯದಿಂದ ಕಾನೂನು ಮತ್ತು ಎಂಬಿಎ ಪದವಿ ಪಡೆದು 1986ರಲ್ಲಿ ವಕೀಲರಾಗಿ ಸೇವೆ ಆರಂಭಿಸಿದ್ದರು. ಆ ಬಳಿಕ ಸಿರ್ಸಾ ಜಿಲ್ಲಾ ನ್ಯಾಯಾಲಯದಲ್ಲಿ ಕೆಲ ಕಾಲ ವಕೀಲಿ ವೃತ್ತಿ ನಡೆಸಿದ್ದು, 1988ರಿಂದ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್​ನಲ್ಲಿ ವಕೀಲರಾಗಿ ಸೇವೆ ಸಲ್ಲಿಸಿದ್ದಾರೆ.

ಇದನ್ನೂ ಓದಿ:ಕಳೆದ 50 ವರ್ಷಗಳಲ್ಲಿ ಇದೇ ಮೊದಲೆನ್ನುವಂತೆ ಬೆಂಗಳೂರಲ್ಲಿ ಮೈಕೊರೆಯುವ ಚಳಿ!

ಹಲವು ವರ್ಷಗಳ ಕಾಲ ಹರಿಯಾಣದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿಯೂ ಸೇವೆ ಸಲ್ಲಿಸಿರುವ ನ್ಯಾ. ಜಸ್ವಂತ್ ಸಿಂಗ್ ಅವರು 2007ರ ಡಿಸೆಂಬರ್ 5ರಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್​​ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. 2021ರ ಅಕ್ಟೋಬರ್ 8ರಿಂದ ಒಡಿಶಾ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿರುವ ಇವರನ್ನೀಗ ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ನಿಯೋಜಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ABOUT THE AUTHOR

...view details