ಕರ್ನಾಟಕ

karnataka

ETV Bharat / city

ಮಾಜಿ ಸಚಿವ ಜಮೀರ್ ಅಹ್ಮದ್‌ ಅವರ ಮನೆ ಮುಂದೆ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

ಚಾಮರಾಜಪೇಟೆ ಕಾಂಗ್ರೆಸ್‌ ಶಾಸಕ ಜಮೀರ್ ಅಹ್ಮದ್‌ ಖಾನ್‌ ವಿರುದ್ಧ ಧಿಕ್ಕಾರ ಕೂಗಿದ ಜೆಡಿಎಸ್ ಕಾರ್ಯಕರ್ತರು ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು..

jds-activists-protest-in-front-of-zameer-ahmed-khan-house
ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

By

Published : Apr 4, 2021, 5:14 PM IST

ಬೆಂಗಳೂರು : ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಜನಾಂಗೀಯ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಜಮೀರ್ ಅಹ್ಮದ್ ಖಾನ್ ನಿವಾಸದ ಮುಂದೆ ಯುವ ಜನತಾದಳ ಕಾರ್ಯಕರ್ತರು ಪ್ರತಿಭಟಿಸಿದರು.

ಜಮೀರ್ ಮನೆ ಮುಂದೆ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

ಮಾಜಿ‌ ಸಚಿವ ಜಮೀರ್ ಅವರು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಕೂಡಲೇ ಅವರು ಕ್ಷಮೆ ಕೇಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.‌ ಜಮೀರ್ ವಿರುದ್ಧ ಧಿಕ್ಕಾರ ಕೂಗಿದ ಜೆಡಿಎಸ್ ಕಾರ್ಯಕರ್ತರು ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಬಳಿಕ ಪ್ರತಿಭಟನಾಕಾರರನ್ನು ಪೊಲೀಸರು ಸ್ಥಳದಿಂದ ತೆರವುಗೊಳಿಸಿದರು. ಈ ವೇಳೆ ಪೊಲೀಸರು ಮತ್ತು ಜೆಡಿಎಸ್ ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೆಯಿತು.

ABOUT THE AUTHOR

...view details