ಕರ್ನಾಟಕ

karnataka

ವಿಲೀನದಂತಹ ಅವಿವೇಕತನ ಪ್ರದರ್ಶನ ಜೆಡಿಎಸ್​​​ ಮಾಡುವುದಿಲ್ಲ: ಹೆಚ್​.ಡಿ.ಕುಮಾರಸ್ವಾಮಿ

ವಿಲೀನದಂತಹ ಅವಿವೇಕತನದ ಪ್ರದರ್ಶನ ಮಾಡುವುದಿಲ್ಲ. ಅಗತ್ಯವಿದ್ದಾಗ ವಿಷಯಾಧಾರಿತವಾಗಿ ಮುಂದಿನ ದಿನಗಳಲ್ಲಿ ಬಿಜೆಪಿ ಜೊತೆ ವಿಶ್ವಾಸಪೂರ್ವಕವಾಗಿ ನಡೆಯಬಹುದಷ್ಟೇ. ವಿಲೀನದ ಕಪೋಲಕಲ್ಪಿತ ಸುದ್ದಿಗಳಿಗೆ ಯಾವುದೇ ಪ್ರಾಮುಖ್ಯತೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್​. ಡಿ ಕುಮಾರಸ್ವಾಮಿ ಹೇಳಿದ್ದಾರೆ.

By

Published : Dec 20, 2020, 6:26 PM IST

Published : Dec 20, 2020, 6:26 PM IST

jds-does-not-do-stupid-display-like-merger-party
ಹೆಚ್​ಡಿ ಕುಮಾರಸ್ವಾಮಿ

ಬೆಂಗಳೂರು : ಜೆಡಿಎಸ್​​ ಸ್ವಾಭಿಮಾನಿ ಕನ್ನಡಿಗರ ಪಕ್ಷವಾಗಿದ್ದು, ಎಂದಿಗೂ ವಿಲೀನದ ಕುರಿತು ಆಲೋಚನೆ ಮಾಡುವುದಿಲ್ಲ ಎಂದು ಬಿಜೆಪಿ ಜೊತೆ ವಿಲೀನದ ಕುರಿತು ಮಾಜಿ ಮುಖ್ಯಮಂತ್ರಿ ಹೆಡ್​.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಟ್ಟೀಟ್​ ಮಾಡಿರುವ ಅವರು, ಜೆಡಿಎಸ್​​ ಸ್ವಾಭಿಮಾನಿ ಕನ್ನಡಿಗರ ಪಕ್ಷವಾಗಿದ್ದು, ಎಂದಿಗೂ ವಿಲೀನದ ಕುರಿತು ಆಲೋಚನೆ ಮಾಡುವುದಿಲ್ಲ. ಜನರ ಗಟ್ಟಿ ಧ್ವನಿಯಾದ ಜೆಡಿಎಸ್‌ ಅಂತಹ ಅವಿವೇಕತನ ಪ್ರದರ್ಶನ ಮಾಡುವುದಿಲ್ಲ. ಅಗತ್ಯವಿದ್ದಾಗ ವಿಷಯಾಧಾರಿತವಾಗಿ ಮುಂದಿನ ದಿನಗಳಲ್ಲಿ ಬಿಜೆಪಿ ಜೊತೆ ವಿಶ್ವಾಸಪೂರ್ವಕವಾಗಿ ನಡೆಯಬಹುದಷ್ಟೇ. ವಿಲೀನದಂಥ ಕಪೋಲಕಲ್ಪಿತ ಸುದ್ದಿಗಳಿಗೆ ಯಾವುದೇ ಪ್ರಾಮುಖ್ಯತೆ ಇಲ್ಲ ಎಂದಿದ್ದಾರೆ.

ಜೆಡಿಎಸ್ ಬಿಜೆಪಿಯ 'ಬಿ ಟೀಂ' ಎಂದು ಟೀಕಿಸಿದ್ದ ಕಾಂಗ್ರೆಸ್ ಹೈಕಮಾಂಡ್ ನಮ್ಮ ಮನೆಬಾಗಿಲಿಗೆ ಬಂದು ಸರ್ಕಾರ ರಚಿಸುವ ಆಹ್ವಾನ ನೀಡಿತ್ತು. ನಾವೇನಾದರೂ ಬಿಜೆಪಿಯ 'ಬಿ ಟೀಂ' ಆಗಿದ್ದರೆ, ಕಾಂಗ್ರೆಸ್‌ನೊಂದಿಗೆ ಸರ್ಕಾರವನ್ನೇ ಮಾಡುತ್ತಿರಲಿಲ್ಲ. ಅವರು ಹೇಳಿದಂತೆ ಒಳ ಒಪ್ಪಂದವೇನೂ ಇಲ್ಲ. ವಿಷಯಾಧಾರಿತ ಹೊಂದಾಣಿಕೆಯಷ್ಟೇ ಸಾಧ್ಯ.

'ರೈತರ ಸಾಲಮನ್ನಾ', 'ಬಡವರ ಬಂಧು' ಇಂತಹ ಕಾರ್ಯಕ್ರಮಗಳನ್ನು ನೀಡಿದ, ಶಿಸ್ತುಬದ್ಧ ಆಡಳಿತ ನಡೆಸಿದ, ದೇವೇಗೌಡರ ಆಶಯದಂತೆ ನಡೆಯುತ್ತಿರುವ ಜೆಡಿಎಸ್‌ ಮೇಲೆ ಜನರ ವಿಶ್ವಾಸವಿದೆ. ಮತ್ತೊಂದು ಪಕ್ಷದೊಂದಿಗೆ ವಿಲೀನ ಮಾಡಿಕೊಳ್ಳುವ ಮೂಲಕ ಸ್ವಯಂ ಆತ್ಮಹತ್ಯೆ ಮಾಡಿಕೊಳ್ಳುವ ಸನ್ನಿವೇಶ ಬಂದಿಲ್ಲ, ಬರುವುದೂ ಇಲ್ಲ ಎಂದು ಈ ಮೂಲಕ ಸ್ಪಷ್ಟಪಡಿಸುತ್ತೇನೆ ಎಂದು ಹೇಳಿದ್ದಾರೆ.

ABOUT THE AUTHOR

...view details