ಕರ್ನಾಟಕ

karnataka

ETV Bharat / city

ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟಿಸಲು ಕರೆದಿದ್ದ ಜೆಡಿಎಸ್ ಪೂರ್ವಭಾವಿ ಸಭೆ ರದ್ದು - Coronavirus disease (COVID-19)

ರಾಜ್ಯ ಸರ್ಕಾರದ ಜನ ವಿರೋಧಿ ಕಾಯ್ದೆ ತಿದ್ದುಪಡಿಗಳ ವಿರುದ್ಧ ಪ್ರತಿಭಟಿಸಲು ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಜೆಡಿಎಸ್ ಪಕ್ಷದ ಶಾಸಕರು, ಸೋತ ಅಭ್ಯರ್ಥಿಗಳು ಹಾಗೂ ಜಿಲ್ಲಾ ಅಧ್ಯಕ್ಷರು ಪೂರ್ವಭಾವಿ ಸಭೆ ಕರೆದಿದ್ದರು..

JDS Preliminary Meeting
ಜೆಡಿಎಸ್ ಪೂರ್ವಭಾವಿ ಸಭೆ ರದ್ದು

By

Published : Aug 3, 2020, 4:44 PM IST

ಬೆಂಗಳೂರು :ದೇಶ ಮತ್ತು ರಾಜ್ಯದಲ್ಲಿ ಕೊರೊನಾ ವೈರಸ್ ವೇಗವಾಗಿ ಹರಡುತ್ತಿರುವ ಹಿನ್ನೆಲೆ ಸರ್ಕಾರದ ವಿರುದ್ಧ ಪ್ರತಿಭಟಿಸಲು ನಾಳೆ ಬೆಳಗ್ಗೆ ಜೆಡಿಎಸ್ ಕಚೇರಿಯಲ್ಲಿ ಕರೆದಿದ್ದ ಪೂರ್ವಭಾವಿ ಸಭೆ ರದ್ದುಗೊಳಿಸಲಾಗಿದೆ.

ರಾಜ್ಯ ಸರ್ಕಾರದ ಜನ ವಿರೋಧಿ ಕಾಯ್ದೆ ತಿದ್ದುಪಡಿಗಳ ವಿರುದ್ಧ ಪ್ರತಿಭಟಿಸಲು ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಜೆಡಿಎಸ್ ಪಕ್ಷದ ಶಾಸಕರು, ಸೋತ ಅಭ್ಯರ್ಥಿಗಳು ಹಾಗೂ ಜಿಲ್ಲಾ ಅಧ್ಯಕ್ಷರು ಪೂರ್ವಭಾವಿ ಸಭೆ ಕರೆದಿದ್ದರು.

ಕೊರೊನಾದಿಂದ ಜನರ ಆರೋಗ್ಯದ ಹಿತದೃಷ್ಟಿಯಿಂದ ಸಾಮೂಹಿಕವಾಗಿ ಸೇರುವುದು ಬೇಡ ಎಂದು ತೀರ್ಮಾನಿಸಿ ಮುಂದೂಡಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಜೆಡಿಎಸ್ ವರಿಷ್ಠ ಹೆಚ್‌ ಡಿ ದೇವೇಗೌಡರು ತಿಳಿಸಿದ್ದಾರೆ.

ABOUT THE AUTHOR

...view details