ಕರ್ನಾಟಕ

karnataka

ETV Bharat / city

ನಾಳೆ‌ ಹೆಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ - ಬೆಂಗಳೂರು ಸುದ್ದಿ

ಪಕ್ಷದ ಸಂಘಟನೆ ಸೇರಿದಂತೆ ಇತರೆ ವಿಚಾರಗಳ ಕುರಿತು ಚರ್ಚಿಸುವ ಸಂಬಂಧ ಸೋಮವಾರ ಸಂಜೆ ಜೆಡಿಎಸ್‌ನ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದೆ.

JDS National Executive Meeting tomorrow headed by HD Deve Gowda
ನಾಳೆ‌ ಹೆಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ

By

Published : Feb 9, 2020, 8:37 PM IST

ಬೆಂಗಳೂರು:ಪಕ್ಷದ ಸಂಘಟನೆ ಸೇರಿದಂತೆ ಇತರೆ ವಿಚಾರಗಳ ಕುರಿತು ಚರ್ಚಿಸುವ ಸಂಬಂಧ ಸೋಮವಾರ ಸಂಜೆ ಜೆಡಿಎಸ್‌ನ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದೆ.

ಜೆಡಿಎಸ್​ ವರಿಷ್ಠ ಹೆಚ್.ಡಿ.ದೇವೇಗೌಡ ಅಧ್ಯಕ್ಷತೆಯಲ್ಲಿ ಜೆಡಿಎಸ್​ ಕಚೇರಿಯಲ್ಲಿ ಸಂಜೆ 6 ಗಂಟೆಗೆ ನಡೆಯುವ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಸೇರಿದಂತೆ ಕರ್ನಾಟಕ,ಕೇರಳ, ತಮಿಳುನಾಡಿನ ಮುಖಂಡರು ಭಾಗವಹಿಸಲಿದ್ದಾರೆ.

ಸಭೆಯಲ್ಲಿ ರಾಜಕೀಯ, ಆರ್ಥಿಕ, ಪಕ್ಷದ ಸಂಘಟನೆ, ಜನಪರ ಹೋರಾಟದ ರೂಪುರೇಷೆ ಸೇರಿದಂತೆ ಇತರೆ ವಿಚಾರಗಳ ಕುರಿತು ಚರ್ಚಿಸಿ ನಿರ್ಣಯಗಳನ್ನು ತೆಗೆದುಕೊಳ್ಳಲಾಗುವುದು. ಹಣಕಾಸು ವರ್ಷವು ಮಾರ್ಚ್ ತಿಂಗಳಿಗೆ ಅಂತ್ಯವಾಗಲಿದ್ದು,ಅಷ್ಟರೊಳಗೆ ಪಕ್ಷದ ಲೆಕ್ಕಪತ್ರ, ಪಕ್ಷದ ಚಟುವಟಿಕೆಗಳು ಮತ್ತು ರಾಷ್ಟ್ರಮಟ್ಟದಲ್ಲಿ ಪಕ್ಷದ ಸ್ಥಾನ ವೃದ್ಧಿಸಲು ಕಾರ್ಯಕಾರಿಣಿಯಲ್ಲಿ ಕೈಗೊಂಡ ತೀರ್ಮಾನಗಳ ಕುರಿತು ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕಾಗಿದ್ದು,ಹೀಗಾಗಿ ಸಭೆ ಕರೆಯಲಾಗಿದೆ.

ABOUT THE AUTHOR

...view details