ಬೆಂಗಳೂರು :ರಾಷ್ಟ್ರಕವಿ ಕುವೆಂಪುರವರು ರಚಿಸಿರುವ ನಾಡಗೀತೆಯನ್ನು ತಿರುಚಿ ಮತ್ತು ಕುವೆಂಪುರವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ರಾಜ್ಯ ಸರ್ಕಾರ ನೇಮಿಸಿರುವ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರನ್ನು ಬಂಧಿಸುವಂತೆ ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದ್ದಾರೆ.
ಬೆಂಗಳೂರು ಮಹಾನಗರ ಜನತಾದಳ (ಜಾತ್ಯಾತೀತ) ಪಕ್ಷದ ವತಿಯಿಂದ ಶೇಷಾದ್ರಿಪುರದಲ್ಲಿರುವ ಜೆಡಿಎಸ್ ಕಚೇರಿ ಸಮೀಪದ ವೃತ್ತದಲ್ಲಿ ಕಾರ್ಯಕರ್ತರು ಪ್ರತಿಭಟಿಸಿದರು, ಸರ್ಕಾರ ಹಾಗೂ ರೋಹಿತ್ ಚಕ್ರತೀರ್ಥ ವಿರುದ್ಧ ಘೋಷಣೆ ಕೂಗಿದರು.