ಕರ್ನಾಟಕ

karnataka

ETV Bharat / city

ಉಪಚುನಾವಣೆಯ 15 ಕ್ಷೇತ್ರಗಳಲ್ಲೂ ಜೆಡಿಎಸ್‌ ಏಕಾಂಗಿ ಸ್ಪರ್ಧೆ: ಹೆಚ್​ ಡಿ ದೇವೇಗೌಡ - ಮೈತ್ರಿಯಿಲ್ಲದೆ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ

ನಮ್ಮ ಪಕ್ಷದಲ್ಲಿ ಪ್ರತಿಯೊಬ್ಬರೂ ಕಾಂಗ್ರೆಸ್ ಜತೆ ಮೈತ್ರಿ ಬೇಡ ಅಂದಿದ್ದಾರೆ. ಮೈತ್ರಿಯಿಂದಾದ ಅನುಭವಗಳನ್ನು ಮುಖಂಡರು ನನ್ನ ಜೊತೆ ಹಂಚಿಕೊಂಡಿದ್ದಾರೆ. ಉಪ ಚುನಾವಣೆ ನಡೆಯಲಿರುವ 15 ಕ್ಷೇತ್ರಗಳಲ್ಲೂ ಜೆಡಿಎಸ್, ಮೈತ್ರಿಯಿಲ್ಲದೆ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಪಕ್ಷದ ವರಿಷ್ಠರಾದ ಹೆಚ್​ ಡಿ ದೇವೇಗೌಡರು ತಿಳಿಸಿದ್ದಾರೆ.

ಹೆಚ್​ ಡಿ ದೇವೇಗೌಡ

By

Published : Sep 21, 2019, 6:27 PM IST

ಬೆಂಗಳೂರು:ಉಪ ಚುನಾವಣೆ ನಡೆಯಲಿರುವ 15 ಕ್ಷೇತ್ರಗಳಲ್ಲೂ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡರು ಸ್ಪಷ್ಟಪಡಿಸಿದರು.

ಕಾಂಗ್ರೆಸ್ ಹಾಗೂ ಜೆಡಿಎಸ್​ನಿಂದ ಅನರ್ಹಗೊಂಡ ಶಾಸಕರ 15 ಕ್ಷೇತ್ರಗಳಿಗೆ ಚುನಾವಣಾ ಆಯೋಗ ಉಪ ಚುನಾವಣೆ ದಿನಾಂಕ ಘೋಷಿಸಿದ ಮಾಡಿದ ಹಿನ್ನೆಲೆ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲಿಯೂ ಜೆಡಿಎಸ್ ಸ್ಪರ್ಧೆ ಮಾಡಲಿದೆ, ಕಾಂಗ್ರೆಸ್ ಜೊತೆ ಮೈತ್ರಿ ಮುಂದುವರಿಸುವುದಿಲ್ಲ. ಅಲ್ಲದೆ ನಮ್ಮ ಪಕ್ಷದಲ್ಲಿ ಪ್ರತಿಯೊಬ್ಬರೂ ಕಾಂಗ್ರೆಸ್ ಜತೆ ಮೈತ್ರಿ ಬೇಡ ಅಂದಿದ್ದಾರೆ. ಮೈತ್ರಿಯಿಂದಾದ ಅನುಭವಗಳನ್ನು ಮುಖಂಡರು ನನ್ನ ಜೊತೆ ಹಂಚಿಕೊಂಡಿದ್ದಾರೆ. ಸೋಲು-ಗೆಲುವು ಬೇರೆ ವಿಷಯ, ಅದರೆ ನಮಗೆ ಯಾರ ಸಹವಾಸವೂ ಬೇಡ. ಮೈತ್ರಿಯಿಲ್ಲದೇ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧೆ ನಡೆಸುತ್ತದೆ ಎಂದರು.

ಜೆಪಿ ಭವನದಲ್ಲಿ ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ ಸುದ್ದಿಗೋಷ್ಠಿ

ಈಗಾಗಲೇ ಇಡೀ 30 ಜಿಲ್ಲೆಗಳ ಪಕ್ಷದ ಕಾರ್ಯಕರ್ತರ ಅಭಿಪ್ರಾಯ ಪಡೆಯಲಾಗಿದೆ. ಸದ್ಯದಲ್ಲೇ ಅಭ್ಯರ್ಥಿಗಳ ಆಯ್ಕೆ ಮಾಡುತ್ತೇವೆ‌. ಅಭ್ಯರ್ಥಿಗಳ ಘೋಷಣೆಗೆ ಇನ್ನೂ ಸಮಯ ಇದೆ. ಉಪ ಚುನಾವಣೆ ಸ್ಪರ್ಧೆ ಬಗ್ಗೆ ತೀರ್ಮಾನಿಸಲು ನಾಳೆ ಪಕ್ಷದ ಹಿರಿಯ ಮುಖಂಡರ ಜೊತೆ ಸಭೆ ನಡೆಸಿ, ಅಂತಿಮವಾಗಿ ಈ ಕುರಿತು ಘೋಷಣೆ ಮಾಡುತ್ತೇವೆ ಎಂದು ದೊಡ್ಡಗೌಡರು ತಿಳಿಸಿದರು.

ಇದೇ ವೇಳೆ ಬಿಜೆಪಿ ಸರ್ಕಾರ ಇನ್ನು ಮೂರು ತಿಂಗಳು ಮಾತ್ರ ಇರಲಿದೆ ಎಂಬ ಕೋಡಿ ಮಠದ ಶ್ರೀಗಳ ಭವಿಷ್ಯ ನುಡಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ದೇವಗೌಡರು, ಕೋಡಿ ಶ್ರೀಗಳು ಸದ್ಗುರುಗಳು, ಅವರ ಬಗ್ಗೆ ನಾನು ಮಾತಾಡಲ್ಲ, ಅನ್ಯಥಾ ಭಾವಿಸಬೇಡಿ.
ಎಂದರು.

ABOUT THE AUTHOR

...view details