ಬೆಂಗಳೂರು:ಕೆಪಿಎಸ್‌ಸಿ ಪರೀಕ್ಷೆ ಫಲಿತಾಂಶ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಸೋಮವಾರ ಕರ್ನಾಟಕ ಲೋಕಸೇವಾ ಆಯೋಗದ ಮುಂದೆ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸಿದರು. "ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ವಿವಿಧ ವೃಂದಗಳ 3,000ಕ್ಕೂ ಹೆಚ್ಚು ಹುದ್ದೆಗಳಿಗೆ ಕೆಪಿಎಸ್‌ಸಿ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆ ಬರೆದಿದ್ದೆವು. ಆದರೆ ಎರಡು ವರ್ಷಗಳು ಕಳೆದರೂ ಫಲಿತಾಂಶ ಪ್ರಕಟಿಸಿಲ್ಲ. ಇದರಿಂದ ಲಕ್ಷಾಂತರ ಅಭ್ಯರ್ಥಿಗಳ ಆಕ್ರೋಶದ ಕಟ್ಟೆ ಒಡೆದಿದೆ" ಎಂದು ಉದ್ಯೋಗಾಕಾಂಕ್ಷಿಗಳು ಆಕ್ರೋಶ ಹೊರಹಾಕಿದರು.
ಪರೀಕ್ಷಾ ಫಲಿತಾಂಶ ಪ್ರಕಟಿಸಲು ವಿಳಂಬ ನೀತಿ: ಕೆಪಿಎಸ್‌ಸಿ ವಿರುದ್ಧ ಪ್ರತಿಭಟನೆ - ಕೆಪಿಎಸ್‌ಸಿ ವಿರುದ್ಧ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ
ಪರೀಕ್ಷಾ ಫಲಿತಾಂಶ ಪ್ರಕಟಿಸಲು ವಿಳಂಬ ನೀತಿ ಅನುಸರಿಸುತ್ತಿರುವ ಕರ್ನಾಟಕ ಲೋಕಸೇವಾ ಆಯೋಗದ(ಕೆಪಿಎಸ್‌ಸಿ) ವಿರುದ್ಧ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸಿದರು.
ಕರ್ನಾಟಕ ಲೋಕಸೇವಾ ಆಯೋಗದ ವಿರುದ್ಧ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ
"ಗೆಜೆಟೆಡ್ ಪ್ರೊಬೇಷನರಿ 106 ಹುದ್ದೆಗಳ ನೇಮಕಾತಿ, 1,323 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳು, ಲೋಕೋಪಯೋಗಿ ಇಲಾಖೆಯ 330 ಕಿರಿಯ ಇಂಜಿನಿಯರ್ ಹುದ್ದೆ, 660 ಸಹಾಯಕ ಇಂಜಿನಿಯರ್, ಗ್ರೂಪ್ ಸಿ (ತಾಂತ್ರಿಕೇತರ) 387 ಹುದ್ದೆ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ 16 ಹುದ್ದೆಗಳು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆದು ವರ್ಷಗಳೇ ಕಳೆದಿವೆ. ಆದರೆ ಕೆಪಿಎಸ್‌ಸಿ ಮಾತ್ರ ಫಲಿತಾಂಶ ಪ್ರಕಟಿಸಿಲ್ಲ" ಎಂದು ಕಿಡಿಕಾರಿದರು.
ಇದನ್ನೂ ಓದಿ:ಪಿಎಸ್‌ಐ ನೇಮಕಾತಿ ಹಗರಣ: ಎಡಿಜಿಪಿ ಅಮೃತ್ ಪೌಲ್ ಜಾಮೀನು ಅರ್ಜಿ ತಿರಸ್ಕಾರ