ಬೆಂಗಳೂರು: ಕೋರ್ಟ್ ಅವರಣದಲ್ಲಿ ವಕೀಲರ ಗಲಾಟೆ ಪ್ರಕರಣ ಸಂಬಂಧ ಬಂಧಿತರಾಗಿರುವ ವಕೀಲ ಜಗದೀಶ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಕೋರ್ಟ್ ಆವರಣದಲ್ಲಿ ದುರ್ವರ್ತನೆ ತೋರಿರುವುದಾಗಿ ಆರೋಪಿಸಿದ ದೂರಿನ ಅನ್ವಯ, ಜಗದೀಶ್ ಅವರನ್ನು ಪೊಲೀಸರು ಬಂಧಿಸಿದ್ದರು.
ವಕೀಲರ ಗಲಾಟೆ ಪ್ರಕರಣ: ವಕೀಲ ಜಗದೀಶ್ಗೆ ನ್ಯಾಯಾಂಗ ಬಂಧನ - ವಕೀಲರ ಸಂಘದಿಂದ ವಕೀಲ ಜಗದೀಶ್ ವಿರುದ್ಧ ದೂರು
ಕೋರ್ಟ್ ಆವರಣದಲ್ಲಿ ದುರ್ವರ್ತನೆ ತೋರಿರುವ ಆರೋಪದಲ್ಲಿ ಬಂಧಿತರಾಗಿರುವ ಜಗದೀಶ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ವಕೀಲರ ಗಲಾಟೆ ಪ್ರಕರಣ: ವಕೀಲ ಜಗದೀಶ್ಗೆ ನ್ಯಾಯಾಂಗ ಬಂಧನ
ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ ನೇತೃತ್ವದ ನಿಯೋಗವು ಪೊಲೀಸ್ ಕಮೀಷನರ್ ಕಮಲ್ ಪಂತ್ಗೆ ಶನಿವಾರ ದೂರು ನೀಡಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿತ್ತು.