ಬೆಂಗಳೂರು: ರಾಜ್ಯದ ನೂತನ ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಫಣೀಂದ್ರ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಇಂದು ರಾಜ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನ್ಯಾಯಮೂರ್ತಿ ಕೆ.ಎನ್ ಫಣೀಂದ್ರ ಅವರಿಗೆ ಪ್ರಮಾಣ ವಚನವನ್ನು ಬೋಧಿಸಿದರು.
2020ರ ಡಿಸೆಂಬರ್ 16ರಂದು ನಿವೃತ್ತ ನ್ಯಾಯಮೂರ್ತಿ ಎನ್.ಆನಂದ್ ಉಪ ಲೋಕಾಯುಕ್ತ ಹುದ್ದೆಯಿಂದ ನಿವೃತ್ತರಾದಾಗಿನಿಂದಲೂ ಈ ಹುದ್ದೆ ಖಾಲಿ ಇತ್ತು. ಮಾರ್ಚ್ 22ರಂದು ನ್ಯಾಯಮೂರ್ತಿ ಫಣೀಂದ್ರ ಅವರ ಹೆಸರನ್ನು ಉಪ ಲೋಕಾಯುಕ್ತ ಹುದ್ದೆಗೆ ನೇಮಕ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದರು. ಇಂದು ನ್ಯಾ. ಫಣೀಂದ್ರ ಅವರು ತಮ್ಮ ಅಧಿಕಾರ ಸ್ವೀಕರಿಸಿದ್ದಾರೆ.