ಕರ್ನಾಟಕ

karnataka

ETV Bharat / city

ಸಂಜೆ ಕೆಪಿಸಿಸಿ ‌ಕಚೇರಿಯಲ್ಲಿ‌ ತುರ್ತು ಸಭೆ ಕರೆದಿರುವ ಕೆ.ಸಿ.ವೇಣುಗೋಪಾಲ್ - k c venugopal

ಎಂಟು ಮಂದಿ ಕಾಂಗ್ರೆಸ್ ಶಾಸಕರ ರಾಜೀನಾಮೆ ಹಿನ್ನೆಲೆ ಇಂದು ಸಂಜೆ ವೇಣುಗೋಪಾಲ್ ತುರ್ತು ಸಭೆ ಕರೆದಿದ್ದಾರೆ.‌

kcv

By

Published : Jul 6, 2019, 3:35 PM IST

Updated : Jul 6, 2019, 3:44 PM IST

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿನ ಹಠಾತ್ ಬೆಳವಣಿಗೆ ಹಿನ್ನೆಲೆ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಇಂದು ಸಂಜೆ ಬೆಂಗಳೂರಿಗೆ ಆಗಮಿಸಲಿದ್ದಾರೆ.

ಇತ್ತ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್​ಗೂ ವಿದೇಶ ಪ್ರವಾಸದಿಂದ ವಾಪಸಾಗಲು ಸೂಚನೆ ನೀಡಲಾಗಿದೆ. ನಾಳೆ ಬೆಳಗ್ಗೆ ದಿನೇಶ್ ಗುಂಡೂರಾವ್ ಬೆಂಗಳೂರಿಗೆ ಆಗಮಿಸಲಿದ್ದಾರೆ.

ಎಂಟು ಮಂದಿ ಕಾಂಗ್ರೆಸ್ ಶಾಸಕರ ರಾಜೀನಾಮೆ ಹಿನ್ನೆಲೆ ಇಂದು ಸಂಜೆ ವೇಣುಗೋಪಾಲ್ ತುರ್ತು ಸಭೆ ಕರೆದಿದ್ದಾರೆ.‌ ಮಾಜಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಪರಮೇಶ್ವರ್, ಸಚಿವ ಡಿಕೆಶಿ, ಕೆ.ಹೆಚ್.ಮುನಿಯಪ್ಪ ,ವೀರಪ್ಪ ಮೊಯ್ಲಿ, ಆರ್.ವಿ.ದೇಶಪಾಂಡೆ, ಹೆಚ್.ಕೆ.ಪಾಟೀಲ್ ಜೊತೆ ಸಭೆ ನಡೆಸಲಿದ್ದಾರೆ.

ಇಂದು ಸಂಜೆ ಕೆಪಿಸಿಸಿ‌ ಕಚೇರಿಯಲ್ಲಿ ನಡೆಯಲಿರುವ ಸಭೆಯಲ್ಲಿ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಲಾಗುವುದು. ಸಭೆಯಲ್ಲಿ ಅತೃಪ್ತರ ರಾಜೀನಾಮೆ ಬಗ್ಗೆ ಸಮಾಲೋಚನೆ ನಡೆಸಲಿದ್ದು, ಮುಂದಿನ‌ ಕಾರ್ಯನೀತಿ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

Last Updated : Jul 6, 2019, 3:44 PM IST

ABOUT THE AUTHOR

...view details