ಕರ್ನಾಟಕ

karnataka

ETV Bharat / city

ಡಿಕೆಶಿಗೆ ಕೆಪಿಸಿಸಿ ಪಟ್ಟ: ಕಾರ್ಯಾಧ್ಯಕ್ಷ ಸ್ಥಾನಕ್ಕೆ ಖಂಡ್ರೆ ರಾಜೀನಾಮೆ ನೀಡಲು ಚಿಂತನೆ? - ಈಶ್ವರ್ ಖಂಡ್ರೆ ಸುದ್ದಿ

ಡಿ.ಕೆ. ಶಿವಕುಮಾರ್​ ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬೆನ್ನಲ್ಲೇ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಬೇಸರಗೊಂಡಿದ್ದಾರೆ ಎನ್ನಲಾಗುತ್ತಿದ್ದು, ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

Kandre Unhappy
ಖಂಡ್ರೆ ಅಸಮಾಧಾನ

By

Published : Mar 11, 2020, 6:42 PM IST

Updated : Mar 11, 2020, 6:57 PM IST

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಈಶ್ವರ್ ಖಂಡ್ರೆ ತಮಗೆ ಅಧ್ಯಕ್ಷ ಸ್ಥಾನ ಸಿಗದೇ ಇರುವುದಕ್ಕೆ ಬೇಸರಗೊಂಡಿದ್ದಾರೆ ಎನ್ನಲಾಗಿದೆ.

ಈ ಹಿಂದೆಯೂ ಕಾರ್ಯಾಧ್ಯಕ್ಷ ಸ್ಥಾನದಲ್ಲಿದ್ದ ಖಂಡ್ರೆ, ಒಬ್ಬರಿಗಿಂತ ಹೆಚ್ಚು ಕಾರ್ಯಾಧ್ಯಕ್ಷ ಸ್ಥಾನ ಬೇಡ ಎಂದು ಅಭಿಪ್ರಾಯ ಪಟ್ಟಿದ್ದರು. ಇದೀಗ ಮೂವರು ಕಾರ್ಯಾಧ್ಯಕ್ಷರನ್ನು ಆಯ್ಕೆ ಮಾಡಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ, ಮಾತ್ರವಲ್ಲ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ಚಿಂತನೆ ನಡೆಸಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.

ಈಶ್ವರ್ ಖಂಡ್ರೆ, ಸಲಿಂ ಅಹಮದ್ ಮತ್ತು ಸತೀಶ್ ಜಾರಕಿಹೋಳಿಯವರನ್ನು ಕಾರ್ಯಾಧ್ಯಕ್ಷ ಸ್ಥಾನಕ್ಕೆ ಎಐಸಿಸಿ ನೇಮಕ ಮಾಡಿದೆ. ಒಟ್ಟಾರೆ ನೂತನ ಅಧ್ಯಕ್ಷರ ನೇಮಕದಿಂದಾಗಿ ಕೆಪಿಸಿಸಿಯಲ್ಲಿ ಅಸಮಾಧಾನ ಹೆಚ್ಚಾಗುವ ಎಲ್ಲಾ ಸಾಧ್ಯತೆಗಳು ಗೋಚರಿಸುತ್ತಿದ್ದು, ಮುಂದಿನ ದಿನಗಳಲ್ಲಿ ಏನಾಗುತ್ತದೆ ಎಂದು ಕಾದು ನೋಡಬೇಕಿದೆ.

Last Updated : Mar 11, 2020, 6:57 PM IST

ABOUT THE AUTHOR

...view details