ಬೆಂಗಳೂರು :ಕನ್ನಡಿಗರ ತೀವ್ರ ಆಕ್ರೋಶದ ಹಿನ್ನೆಲೆ ಕನ್ನಡ ಮತ್ತು ಸಂಸ್ಜೃತಿ ಇಲಾಖೆಯ ವೆಬ್ಸೈಟ್ನಲ್ಲಿ ಹಾಕಲಾಗಿದ್ದ ಹಿಂದಿ ಬ್ಯಾನರನ್ನು ತೆಗೆದು ಹಾಕಿದೆ. ಕನ್ನಡ ಮತ್ತು ಸಂಸ್ಕೃತಿ ವೆಬ್ಸೈಟ್ನಲ್ಲಿ ‘ಪ್ರತಿ ಮನೆಯಲ್ಲಿ ತ್ರಿವರ್ಣ’(ಹರ್ ಘರ್ ತಿರಂಗಾ) ಅಭಿಯಾನದ ಹಿಂದಿ ಭಾಷೆಯ ಪ್ರಚಾರದ ಬ್ಯಾನರ್ ಅಳವಡಿಸಲಾಗಿತ್ತು. ಇದರ ವಿರುದ್ಧ ಕನ್ನಡಿಗರು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಟೀಕೆ ವ್ಯಕ್ತಪಡಿಸಿದ್ದರು.
ಈ ಸಂಬಂಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೂಡ ಟ್ವೀಟ್ ಮೂಲಕ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಕೇಂದ್ರ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ 'ಸಂಕಲ್ಪ್ ಸೆ ಸಿದ್ಧಿ' ಎಂಬ ಕಾರ್ಯಕ್ರಮದ ಬ್ಯಾನರ್ ಸಂಪೂರ್ಣ ಹಿಂದಿಮಯವಾಗಿತ್ತು. ಇನ್ನೊಂದೆಡೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತನ್ನ ಜಾಲತಾಣದಲ್ಲಿ ಹಿಂದಿಯ ಕಿರೀಟ ಇಟ್ಟುಕೊಂಡು ಮೆರೆಸುತ್ತಿದೆ. ರಾಜ್ಯದ ಬಿಜೆಪಿ ಸರ್ಕಾರ ತನ್ನತನವನ್ನು ಅಡವಿಟ್ಟು ಹಿಂದಿ ಭಾಷೆಗೆ ಸಂಪೂರ್ಣ ಶರಣಾಗತವಾಗಿದೆ ಎಂಬುದಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾಲತಾಣವೇ ಸಾಕ್ಷಿ ಎಂದು ಟೀಕಿಸಿದ್ದರು.