ಕರ್ನಾಟಕ

karnataka

ETV Bharat / city

ಕನ್ನಡ ರಾಜ್ಯೋತ್ಸವ ಆಚರಣೆ : ಪುನೀತ್ ರಾಜ್​ಕುಮಾರ್ ಪುತ್ಥಳಿ ನಿರ್ಮಾಣಕ್ಕೆ ಆಗ್ರಹ

ಬೆಂಗಳೂರಿನ ನಾಗರಿಕರಿಗೆ 66ನೇ ಕನ್ನಡ ರಾಜ್ಯೋತ್ಸವ ಶುಭಾಶಯಗಳು ಮತ್ತು ಯುವಕರ ಆಶಾಕಿರಣ, ರಾಷ್ಟ ಪ್ರಶಸ್ತಿ ಪುರಸ್ಕೃತ ಪುನೀತ್ ರಾಜ್ ಕುಮಾರ್ ಅಕಾಲಿಕ ಆಗಲಿಕೆ ದುಃಖಕರ ಸಂಗತಿ. ಇದು ರಾಜ್ಯಕ್ಕೆ ತುಂಬಲಾರದ ನಷ್ಟ. ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಚಲನಚಿತ್ರಗಳನ್ನು ಅವರು ಕೊಡುಗೆಯಾಗಿ ನೀಡಿದ್ದಾರೆ. ಬಿಬಿಎಂಪಿ ನೌಕರರ ಹಾಗೂ ಅಭಿಮಾನಿಗಳ ಭಾವನೆಗಳಿಗೆ ನಾವು ಸ್ಪಂದಿಸುತ್ತೇವೆ. ಕೋರ್ಟ್ ಅನುಮತಿ ಪಡೆದು ಆನಂತರ ಪುತ್ಥಳಿ ನಿರ್ಮಾಣಕ್ಕೆ ಮುಂದಾಗುತ್ತೇವೆ..

Kannada Rajyotsava celebration at BBMP
ಕನ್ನಡ ರಾಜ್ಯೋತ್ಸವ ಆಚರಣೆ

By

Published : Nov 1, 2021, 11:35 AM IST

ಬೆಂಗಳೂರು: ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ 66ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಸರಳವಾಗಿ ಆಚರಿಸಲಾಯಿತು.

ಬಿಬಿಂಎಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ಗೌರವ್ ಗುಪ್ತ ಧ್ವಜಾರೋಹಣ ನೆರವೇರಿಸಿದರು. ವಿದ್ಯಾರ್ಥಿಗಳು, ಪೌರ ಕಾರ್ಮಿಕರು, ಅಧಿಕಾರಿ ನೌಕರರ ಸಂಘದವರು ಈ ವೇಳೆ ಸಾಥ್ ನೀಡಿದರು. ನಂತರ ನಾಡಗೀತೆಯನ್ನು ಹಾಡಲಾಯಿತು. ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಶಿಸ್ತಿನ ಪಥಸಂಚಲನ ನಡೆಸಿದರು.

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಇನ್ನು, ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಡಾ.ರಾಜ್ ಕುಮಾರ್ ಪುತ್ಥಳಿ ಇರುವ ಸ್ಥಳದಲ್ಲೇ ಪುನೀತ್ ರಾಜ್ ಕುಮಾರ್ ಭಾವಚಿತ್ರವನ್ನಿಟ್ಟು ಪುಷ್ಪ ನಮನ ಸಲ್ಲಿಸಲಾಯಿತು. ಇದೇ ವೇಳೆ ಪಾಲಿಕೆ ಆವರಣದಲ್ಲಿ ಯುವರತ್ನ ಪುನೀತ್ ರಾಜ್ ಕುಮಾರ್ ಪುತ್ಥಳಿ ನಿರ್ಮಾಣಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಬಿಬಿಎಂಪಿ ನೌಕರರ ಸಂಘ ಮನವಿ ಮಾಡಿತು.

ಮುಖ್ಯ ಆಯುಕ್ತರಾದ ಗೌರವ್ ಗುಪ್ತ ಮಾತನಾಡಿ, ಬೆಂಗಳೂರಿನ ನಾಗರಿಕರಿಗೆ 66ನೇ ಕನ್ನಡ ರಾಜ್ಯೋತ್ಸವ ಶುಭಾಶಯಗಳು ಮತ್ತು ಯುವಕರ ಆಶಾಕಿರಣ, ರಾಷ್ಟ ಪ್ರಶಸ್ತಿ ಪುರಸ್ಕೃತ ಪುನೀತ್ ರಾಜ್ ಕುಮಾರ್ ಅಕಾಲಿಕ ಆಗಲಿಕೆ ದುಃಖಕರ ಸಂಗತಿ. ಇದು ರಾಜ್ಯಕ್ಕೆ ತುಂಬಲಾರದ ನಷ್ಟ.

ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಚಲನಚಿತ್ರಗಳನ್ನು ಅವರು ಕೊಡುಗೆಯಾಗಿ ನೀಡಿದ್ದಾರೆ. ಬಿಬಿಎಂಪಿ ನೌಕರರ ಹಾಗೂ ಅಭಿಮಾನಿಗಳ ಭಾವನೆಗಳಿಗೆ ನಾವು ಸ್ಪಂದಿಸುತ್ತೇವೆ. ಕೋರ್ಟ್ ಅನುಮತಿ ಪಡೆದು ಆನಂತರ ಪುತ್ಥಳಿ ನಿರ್ಮಾಣಕ್ಕೆ ಮುಂದಾಗುತ್ತೇವೆ ಎಂದರು.

ಬಿಬಿಎಂಪಿ ಕನ್ನಡ ಸಂಘದ ಪ್ರಧಾನ ಕಾರ್ಯದರ್ಶಿ ಅಮೃತ್ ರಾಜ್ ಮಾತನಾಡಿ, ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ. ಬಿಬಿಎಂಪಿ ಕನ್ನಡ ನೌಕರರ ಸಂಘ ಕನ್ನಡ ನಾಡು, ನುಡಿಗಾಗಿ ಶ್ರಮಿಸುತ್ತಿದೆ.

ಕನ್ನಡ ಸಂಘದ ಅವರಣದಲ್ಲಿ ಡಾ.ರಾಜ್ ಕುಮಾರ್ ಅವರ ಪ್ರತಿಮೆ ಪಕ್ಕದಲ್ಲಿ ಪುನೀತ್ ರಾಜ್ ಕುಮಾರ್ ಅವರ ಕಂಚಿನ ಪ್ರತಿಮೆ ನಿರ್ಮಿಸಲು ಮುಖ್ಯ ಆಯುಕ್ತರಿಗೆ ಕನ್ನಡ ಸಂಘ ಮನವಿ ಸಲ್ಲಿಸಿದೆ. ಅನುಮತಿ ನೀಡಿದ್ರೆ ಮುಂದಿನ ಎರಡು ತಿಂಗಳಲ್ಲಿ ರಾಜ್ ಕುಮಾರ್ ಕುಟುಂಬಸ್ಥರನ್ನ ಭೇಟಿ ಮಾಡಿ, ಪ್ರತಿಮೆ ಆನಾವರಣ ಮಾಡಲಾಗುವುದು ಎಂದರು.

ABOUT THE AUTHOR

...view details