ಬೆಂಗಳೂರು: ರಾಜ್ಯದಲ್ಲಿಂದು ಮತ್ತೆ ಸೋಂಕಿತರ ಸಂಖ್ಯೆ ಏರಿಕೆ ಆಗಿದ್ದು, ಹೊಸದಾಗಿ 2,566 ಮಂದಿಗೆ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 9,81,044ಕ್ಕೆ ಏರಿಕೆ ಆಗಿದೆ.
ಒಂದು ದಿನದಲ್ಲಿ 13 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆಯು 12,484ಕ್ಕೆ ಏರಿದೆ. 1,207 ಮಂದಿ ಗುಣಮುಖರಾಗಿದ್ದು, ಈವರೆಗೆ 9,48,988 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.