ಬೆಂಗಳೂರು :ರಾಜ್ಯದಲ್ಲಿಂದು 94,651 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 322 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 29,95,285ಕ್ಕೆ ಏರಿಕೆ ಆಗಿದೆ.
ಇತ್ತ 176 ಮಂದಿ ಡಿಸ್ಜಾರ್ಜ್ ಆಗಿದ್ದಾರೆ. ಈವರೆಗೂ 29,50,306 ಮಂದಿ ಗುಣಮುಖರಾಗಿದ್ದಾರೆ. ಮೂವರು ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 38,196ಕ್ಕೆ ಏರಿಕೆ ಆಗಿದೆ. ಸದ್ಯ ಸಕ್ರಿಯ ಪ್ರಕರಣಗಳು 6,754 ರಷ್ಟಿವೆ. ಈ ಮೂಲಕ ಸೋಂಕಿತರ ಪ್ರಮಾಣ ಶೇ.0.34% ರಷ್ಟಿದ್ದರೆ ಸಾವಿನ ಪ್ರಮಾಣ 0.93 % ರಷ್ಟಿದೆ.