ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಇಂದು (ಶನಿವಾರ) ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಬೆಳಗ್ಗೆ 11ಕ್ಕೆ ಮಲ್ಲೇಶ್ವರಂನ ಪಿಯುಸಿ ಬೋರ್ಡ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ.
ಎಸ್ಎಸ್ಎಲ್ಸಿ ಫಲಿತಾಂಶದ ರೀತಿಯೇ ವಿದ್ಯಾರ್ಥಿಗಳ ಮೊಬೈಲ್‌ಗೆ ಫಲಿತಾಂಶ ರವಾನೆಯಾಗಲಿದೆ. ವಿದ್ಯಾರ್ಥಿಗಳು ಮಧ್ಯಾಹ್ನ 12ಕ್ಕೆhttp://www.karresults.nic.inವೆಬ್‌ಸೈಟ್ ಮೂಲಕ ಫಲಿತಾಂಶ ವೀಕ್ಷಿಸಬಹುದು. ಈ ಬಾರಿ 6,84,255 ವಿದ್ಯಾರ್ಥಿಗಳು ಪರೀಕ್ಷೆ ನೋಂದಣಿ ಮಾಡಿದ್ದರು. ಈ ಪೈಕಿ ಬಾಲಕರು-3,46,936, ಬಾಲಕಿಯರು-3,37,319 ಇದ್ದಾರೆ.