ಬೆಂಗಳೂರು: ರಾಜ್ಯ ಬಿಜೆಪಿ ಘಟಕ ಹಾಗೂ ರಾಜ್ಯಸಭಾ ಟಿಕೆಟ್ ಆಕಾಂಕ್ಷಿಗಳಿಗೆ ಬಿಜೆಪಿ ಹೈಕಮಾಂಡ್ ಶಾಕ್ ನೀಡಿದ್ದು, ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಅಚ್ಚರಿ ಮೂಡಿಸಿದೆ.
ಈರಣ್ಣ ಕಡಾಡಿ ಮತ್ತು ಅಶೋಕ್ ಗಸ್ತಿಯನ್ನು ರಾಜ್ಯಸಭಾ ಅಭ್ಯರ್ಥಿಗಳಾಗಿ ಬಿಜೆಪಿ ವರಿಷ್ಠರು ಘೋಷಣೆ ಮಾಡಿದ್ದಾರೆ.

ರಾಜ್ಯಸಭಾ ಟಿಕೆಟ್ ಆಕಾಂಕ್ಷಿಗಳು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೇಲೆ ಒತ್ತಡ ಹೇರಿ ರೆಬಲ್ ಚಟುವಟಿಕೆ ನಡೆಸಿದ್ದು, ಈ ಬಳಿಕ ರಾಜ್ಯ ಬಿಜೆಪಿ ಕೋರ್ ಕಮಿಟಿಯು ಪ್ರಭಾಕರ್ ಕೋರೆ, ರಮೇಶ್ ಕತ್ತಿ, ಪ್ರಕಾಶ್ ಶೆಟ್ಟಿ ಹೆಸರನ್ನು ಅಂತಿಮಗೊಳಿಸಿ ಪಕ್ಷದ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಿಕೊಟ್ಟಿತ್ತು. ಇವರ ಜೊತೆ ಮಾ.ನಾಗರಾಜ್ ಹಾಗೂ ನಿರ್ಮಲ್ ಕುಮಾರ್ ಸುರಾನ ಹೆಸರುಗಳೂ ಕೇಳಿ ಬಂದಿದ್ದವು.
ಆದರೆ, ಇಂದು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದು, ರಾಜ್ಯ ಘಟಕ ಶಿಫಾರಸು ಮಾಡಿದ್ದ ಯಾವುದೇ ಹೆಸರನ್ನು ಪರಿಗಣಿಸದೇ ಹೊಸ ಹೆಸರುಗಳನ್ನು ಪ್ರಕಟಿಸಿದೆ. ಬೆಳಗಾವಿ ವಿಭಾಗ ಪ್ರಭಾರಿಯಾಗಿರುವ ಈರಣ್ಣ ಕಡಾಡಿ ಹಾಗೂ ಬಳ್ಳಾರಿ ವಿಭಾಗ ಪ್ರಭಾರಿಯಾಗಿರುವ ಅಶೋಕ್ ಗಸ್ತಿಯನ್ನು ರಾಜ್ಯಸಭಾ ಅಭ್ಯರ್ಥಿಗಳಾಗಿ ಘೋಷಣೆ ಮಾಡಲಾಗಿದೆ.