ಕರ್ನಾಟಕ

karnataka

ETV Bharat / city

ಅಶಿಸ್ತು ಸಹಿಸಲ್ಲ, ಕುಟುಂಬ ರಾಜಕಾರಣಕ್ಕೆ ಮಣೆ ಹಾಕಲ್ಲ: ಕಾರ್ಯಕಾರಿಣಿಯಲ್ಲಿ ಹೊಸ ಟಾಸ್ಕ್ ನೀಡಿದ ಸಂತೋಷ್

ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾರ್ಗದರ್ಶನ ನೀಡಿದ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್, ಪಕ್ಷದ ನಾಯಕರಿಂದ ಹಿಡಿದು ಕಟ್ಟ ಕಡೆಯ ಕಾರ್ಯಕರ್ತನವರೆಗೂ ಶಿಸ್ತಿನ ಪಾಠ ಮಾಡಿದರು.

Karnataka BJP Executive meeting
ಕಾರ್ಯಕಾರಿಣಿಯಲ್ಲಿ ಮಾತನಾಡಿದ ಬಿ.ಎಲ್ ಸಂತೋಷ್

By

Published : Apr 17, 2022, 7:29 AM IST

ಬೆಂಗಳೂರು/ವಿಜಯನಗರ:ಮುಖ್ಯಮಂತ್ರಿಯಿಂದ ಹಿಡಿದು ಸಾಮಾನ್ಯ ಕಾರ್ಯಕರ್ತರವರೆಗೂ ಎಲ್ಲರೂ ಶಿಸ್ತು ಪಾಲಿಸಬೇಕು. ಯಾವ ಕಾರಣಕ್ಕೂ ಅಶಿಸ್ತು ಸಹಿಸಲ್ಲ. ಪಕ್ಷದ ವರ್ಚಸ್ಸಿಗೆ ಧಕ್ಕೆ ತರುವಂತೆ ನಡೆದುಕೊಂಡರೆ ಕ್ರಮ ಖಚಿತ ಎನ್ನುವ ಸ್ಪಷ್ಟ ಸಂದೇಶವನ್ನು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ನೀಡಲಾಗಿದೆ. ಅಲ್ಲದೇ, ಕುಟುಂಬ ರಾಜಕಾರಣಕ್ಕೂ ಬ್ರೇಕ್ ಬೀಳಲಿದೆ ಎನ್ನುವುದನ್ನೂ ಪ್ರಸ್ತಾಪಿಸಲಾಗಿದೆ.

ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾರ್ಗದರ್ಶನ ನೀಡಿದ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಪಕ್ಷದ ನಾಯಕರಿಂದ ಹಿಡಿದು ಕಟ್ಟ ಕಡೆಯ ಕಾರ್ಯಕರ್ತನವರೆಗೂ ಶಿಸ್ತಿನ ಪಾಠ ಮಾಡಿದರು. ಚುನಾವಣಾ ವರ್ಷವಾಗಿರುವ ಹಿನ್ನೆಲೆ ಅಶಿಸ್ತಿನಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆಯಾದರೆ ಸಹಿಸಲು ಸಾಧ್ಯವಿಲ್ಲ. ಪಕ್ಷದ ಸಾಮಾನ್ಯ ಕಾರ್ಯಕರ್ತನಿಂದ ಹಿಡಿದು, ಶಾಸಕರು, ಸಚಿವರು, ಮುಖ್ಯಮಂತ್ರಿ, ಪಕ್ಷದ ನಾಯಕರು ಯಾರೇ ಆಗಿದ್ದರೂ ಪಕ್ಷದ ವರ್ಚಸ್ಸಿಗೆ ಧಕ್ಕೆ ಬರುವಂತೆ ನಡೆದುಕೊಂಡರೆ ಪಕ್ಷ ಸಹಿಸುವುದಿಲ್ಲ. ಈಶ್ವರಪ್ಪ ರಾಜೀನಾಮೆ ಕೂಡ ಪಕ್ಷದ ವರ್ಚಸ್ಸಿನ ವಿಷಯವೇ ಆಗಿದೆ. ಹಾಗಾಗಿ ಅವರು ರಾಜೀನಾಮೆ ಕೊಟ್ಟಿದ್ದಾರೆ ಎಂದು ಪರೋಕ್ಷವಾಗಿ ಕೆಲವು ಸಚಿವರಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ರಾಷ್ಟ್ರಮಟ್ಟದಲ್ಲಿ ಕುಟುಂಬ ರಾಜಕಾರಣವನ್ನು ಟೀಕಿಸುತ್ತಾ ಬಂದಿರುವ ಬಿಜೆಪಿ ರಾಜ್ಯದಲ್ಲಿ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಿ ಟೀಕೆಗೆ ಗುರಿಯಾಗುತ್ತಿರುವ ವಿಷಯ ಪ್ರಸ್ತಾಪಿಸಿದ ಬಿ.ಎಲ್ ಸಂತೋಷ್, ಪಕ್ಷದಲ್ಲಿ ಇನ್ನು ಮುಂದೆ ಕುಟುಂಬ ರಾಜಕಾರಣಕ್ಕೆ ಅವಕಾಶವಿಲ್ಲ ಎನ್ನುವ ಪ್ರಸ್ತಾಪದೊಂದಿಗೆ ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿಯೂ ಕುಟುಂಬ ರಾಜಕಾರಣಕ್ಕೆ ಅವಕಾಶವಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ. ವಯಸ್ಸಿನ ಕಾರಣದಿಂದ ಪುತ್ರರಿಗೆ ಟಿಕೆಟ್ ಕೊಡಿಸುವ ಚಿಂತನೆಯಲ್ಲಿರುವ ಹಲವು ಬಿಜೆಪಿ ಹಿರಿಯ ನಾಯಕರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ನಕಾರಾತ್ಮಕ ಅಂಶ ಪತ್ತೆ ಟಾಸ್ಕ್:ಪಕ್ಷದ ಪ್ರಭಾರಿಗಳು ಮತ್ತು ಸಹ ಪ್ರಭಾರಿಗಳಿಗೆ ಬಿ.ಎಲ್. ಸಂತೋಷ್ ಹೊಸ ಟಾಸ್ಕ್ ನೀಡಿದ್ದಾರೆ. ಉತ್ತರ ಕರ್ನಾಟಕ, ಮಧ್ಯ ಕರ್ನಾಟಕದಲ್ಲಿ ಬಿಜೆಪಿ ಪ್ರಬಲವಾಗಿದೆ. ಹಳೆ ಮೈಸೂರು ಭಾಗದಲ್ಲಿ ಪಕ್ಷ ದುರ್ಬಲವಾಗಿದೆ ಎನ್ನುವ ತೀರ್ಮಾನಕ್ಕೆ ನಾವು ಬಂದಿರುವುದು ಸರಿಯಲ್ಲ. ಎಲ್ಲಾ ಕ್ಷೇತ್ರಗಳ ಅವಲೋಕನ ಅಗತ್ಯವಾಗಿದೆ. ಹಾಗಾಗಿ ಒಂದು ತಿಂಗಳಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಇರುವ ದೌರ್ಬಲ್ಯ​​ಗಳನ್ನು ಪತ್ತೆ ಹಚ್ಚಿ ವರದಿ ನೀಡಬೇಕು ಎಂದು ಪ್ರಭಾರಿಗಳಿಗೆ ಜವಾಬ್ದಾರಿ ವಹಿಸಿದರು.

ಇದನ್ನೂ ಓದಿ:ಬಹುನಿರೀಕ್ಷಿತ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಚಾಲನೆ : ಮುಂದಿನ ವಿಧಾನಸಭಾ ಚುನಾವಣೆಗೆ ನೀಲನಕ್ಷೆ!?

ABOUT THE AUTHOR

...view details