ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಚೊಚ್ಚಲ ಬಜೆಟ್ನಲ್ಲಿ ತವರು ಜಿಲ್ಲೆ ಹಾವೇರಿಗೆ ಬಂಪರ್ ಕೊಡುಗೆಗಳನ್ನು ಘೋಷಣೆ ಮಾಡಿದ್ದಾರೆ. ವಿವಿಧ ಜಿಲ್ಲೆಗಳಿಗೂ ಕೊಡುಗೆಗಳನ್ನು ನೀಡುವುದರ ಜೊತೆಗೆ ತಮ್ಮ ತವರು ಜಿಲ್ಲೆಗೆ 15 ಕಾರ್ಯಕ್ರಮಗಳ ಘೋಷಣೆ ಮಾಡಿ ಭರಪೂರ ಕೊಡುಗೆಗಳನ್ನು ನೀಡಿದ್ದಾರೆ.
ಬಜೆಟ್ನಲ್ಲಿ ತವರು ಜಿಲ್ಲೆಗೆ ಭರಪೂರ ಕೊಡುಗೆ ನೀಡಿದ ಸಿಎಂ ಬೊಮ್ಮಾಯಿ - ಹಾವೇರಿ ಜಿಲ್ಲೆಗೆ ಭರಪೂರ ಕೊಡುಗೆ
Karnataka Budget 2022: ಸಿಎಂ ಬಸವರಾಜ ಬೊಮ್ಮಾಯಿ ತವರು ಜಿಲ್ಲೆ ಹಾವೇರಿಗೆ ಬಂಪರ್ ಕಾರ್ಯಕ್ರಮಗಳನ್ನ ನೀಡಿದ್ದಾರೆ. ಹಾವೇರಿ ಜಿಲ್ಲೆಗೆ ಒಟ್ಟು 15 ಕಾರ್ಯಕ್ರಮಗಳ ಘೋಷಣೆ ಮಾಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ತವರು ಜಿಲ್ಲೆಗೆ ಸಿಎಂ ಬಜೆಟ್ ಕೊಡುಗೆ ಏನು?:
- ಹಿರೇಕೆರೂರಿನಲ್ಲಿ ಗೋವಿನ ಜೋಳ ಸಂಶೋಧನಾ ಕೇಂದ್ರ.
- ಹಾನಗಲ್ನಲ್ಲಿ ಮಾವು ಸಂಸ್ಕರಣಾ ಘಟಕ.
- ಹಾವೇರಿಯಲ್ಲಿ 1 ಲಕ್ಷ ಲೀಟರ್ ಸಾಮರ್ಥ್ಯದ ಮೆಗಾ ಡೈರಿ ಸ್ಥಾಪನೆ.
- ಕಾಲೇಜುಗಳ ಮೇಲ್ವಿಚಾರಣೆ ಸುಧಾರಣೆಗೆ ಹಾವೇರಿ ಸೇರಿ ಏಳು ಜಿಲ್ಲೆಗಳಲ್ಲಿ ವಿನೂತನ ಮಾದರಿಯ ವಿವಿ ಸ್ಥಾಪನೆ.
- ಹಾವೇರಿ ಸೇರಿ ನಾಲ್ಕು ಜಿಲ್ಲೆಗಳಲ್ಲಿ 'ಮುಖ್ಯಮಂತ್ರಿ ಆರೋಗ್ಯ ವಾಹಿನಿ' ಹೆಸರಿನ ಸಂಚಾರಿ ಕ್ಲಿನಿಕ್.
- ಶಿಗ್ಗಾಂವಿ ತಾಲೂಕು ಸಾರ್ವಜನಿಕ ಆಸ್ಪತ್ರೆ 250 ಹಾಸಿಗೆಗಳಿಗೆ ಮೇಲ್ದರ್ಜೆಗೆ.
- ಸವಣೂರು ತಾಲೂಕಿನಲ್ಲಿ ಹೊಸ ಆಯುರ್ವೇದ ಕಾಲೇಜು ಸ್ಥಾಪನೆ.
- ಚರ್ಮ ಕುಶಲಕರ್ಮಿಗಳಿಗೆ ಹಾವೇರಿಯಲ್ಲಿ ಸಾಮಾನ್ಯ ಸೌಲಭ್ಯ ಸಮುಚ್ಛಯ ಸ್ಥಾಪನೆ.
- ಶಿಗ್ಗಾಂವಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಏರೋಸ್ಪೇಸ್, ಇಂಜಿನಿಯರಿಂಗ್, ಇಂಡಸ್ಟ್ರಿಯಲ್ ಆಟೋಮೇಷನ್, ಎಲೆಕ್ಟ್ರಾನಿಕ್ ಕ್ಷೇತ್ರಗಳ ತರಬೇತುದಾರರಿಗೆ ತರಬೇತಿ ಕೇಂದ್ರ.
- ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರುಗಳಿಗೆ ಹೊಸ ರೈಲು ಮಾರ್ಗ ಯೋಜನೆ.
- ಹಾವೇರಿಯಲ್ಲಿ ಕೈಗಾರಿಕೆ ಸ್ಥಾಪಿಸಲು ಉತ್ತೇಜನ.
- ರಾಣೆಬೆನ್ನೂರಿನಲ್ಲಿ ನೂತನ ಜವಳಿ ಪಾರ್ಕ್.
- ಹಾವೇರಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಗೆ 20 ಕೋಟಿ ರೂ. ನಿಗದಿ
- ಹಾವೇರಿಯಲ್ಲಿ ಡಾ.ಮಹಾದೇವ ಬಣಕಾರರ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ 2 ಕೋಟಿ ರೂ.
- ಶಿಗ್ಗಾಂವಿಯಲ್ಲಿ ಬಸ್ ಘಟಕ ಮತ್ತು ಚಾಲನಾ ತರಬೇತಿ ಕೇಂದ್ರಕ್ಕೆ 28 ಕೋಟಿ ರೂ.
ಇದನ್ನೂ ಓದಿ:ಚೊಚ್ಚಲ ಬಜೆಟ್ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಸಮರ್ಥನೆ ಏನು?