ಬೆಂಗಳೂರು: ಮುಂದಿನ ವಾರದಿಂದ ಸಿಎಂ ಬೊಮ್ಮಾಯಿ ಬಜೆಟ್ ತಯಾರಿ ಆರಂಭಿಸಲಿದ್ದಾರೆ. ಈ ನಿಟ್ಟಿನಲ್ಲಿ ಫೆ.9ರಿಂದ ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ.
ಪೂರ್ವಭಾವಿ ಚರ್ಚೆಗೆ ನಿಗದಿಪಡಿಸಿರುವ ದಿನಾಂಕ, ಸಮಯದಂದು ಅವಶ್ಯಕ ಮಾಹಿತಿಯೊಂದಿಗೆ ಸಚಿವರು ತಮ್ಮ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದಶಿಗಳೊಂದಿಗೆ 4 ಅಧಿಕಾರಿಗಳು ಮೀರದಂತೆ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸುವಂತೆ ಸೂಚಿಲಾಗಿದೆ.
ಪೂರ್ವಭಾವಿ ಸಭೆಯ ದಿನಾಂಕ, ಇಲಾಖೆ ವಿವರ:
ಫೆ.9ರಂದು ಶಕ್ತಿ ಭವನದಲ್ಲಿ ಬಜೆಟ್ ಪೂರ್ವಭಾವಿ ಸಭೆ ಆರಂಭವಾಗಲಿದೆ. ಫೆ.9ರಂದು ಕಂದಾಯ, ಉನ್ನತ ಶಿಕ್ಷಣ, ಐಟಿ ಬಿಟಿ, ವಿಜ್ಞಾನ ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ, ಲೋಕೋಪಯೋಗಿ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜೊತೆ ಪೂರ್ವಭಾವಿ ಸಭೆ ನಡೆಯಲಿದೆ.
ಫೆ.10ರಂದು ಕೈಮಗ್ಗ ಮತ್ತು ಜವಳಿ, ಸಕ್ಕರೆ, ಕೃಷಿ, ಕಾರ್ಮಿಕ, ಇ-ಆಡಳಿತ, ಬೃಹತ್ ಕೈಗಾರಿಕೆ, ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ, ಪೌರಾಡಳಿತ, ನಗರಾಭಿವೃದ್ಧಿ, ಸಾರಿಗೆ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜೊತೆ ಸಭೆ ನಡೆಯಲಿದೆ.
ಫೆ.11ರಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ, ಸಕಾಲ, ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್, ಸಹಕಾರ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ, ಮುಜರಾಯಿ, ಹಜ್ ಮತ್ತು ವಕ್ಫ್, ಅಲ್ಪಸಂಖ್ಯಾತ ಕಲ್ಯಾಣ, ಕಾನೂನು, ಸಂಸದೀಯ ವ್ಯವಹಾರಗಳು, ಶಾಸನ ರಚನೆ, ಸಣ್ಣ ನೀರಾವರಿ, ಯೋಜನೆ ಮತ್ತು ಸಾಂಖ್ಯಿಕ ಇಲಾಖೆ, ತೋಟಗಾರಿಕೆ ಇಲಾಖೆ ಜೊತೆ ಸಭೆ ನಡೆಸಲಿದ್ದಾರೆ.