ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ತಮ್ಮ ಮೊದಲನೇ ಹಾಗೂ 2022ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮಂಡನೆ ಮಾಡುತ್ತಿದ್ದಾರೆ. ಕೋವಿಡ್ ಮೂರನೇ ಅಲೆಯಿಂದ ಚೇತರಿಸಿಕೊಳ್ಳುತ್ತಿರುವ ಈ ಸಂದರ್ಭದಲ್ಲಿ ಆರೋಗ್ಯ ಕ್ಷೇತ್ರ ಬಹುಮುಖ್ಯವಾಗಿದೆ.
ಆರೋಗ್ಯ ಕ್ಷೇತ್ರಕ್ಕೆ ಬಜೆಟ್ ಕೊಡುಗೆ ಇಂತಿದೆ.. - ಕರ್ನಾಟಕ ಬಜೆಟ್ 2022
ಬೆಂಗಳೂರಿನ ಎಲ್ಲ ವಾರ್ಡ್‌ಗಳಲ್ಲಿ ಹಾಗೂ ಪ್ರಮುಖ ನಗರಗಳಲ್ಲಿ ಸಾಂಕ್ರಾಮಿಕವಲ್ಲದ ರೋಗಗಳ ತಪಾಸಣೆಗಾಗಿ 438 'ನಮ್ಮ ಕ್ಲಿನಿಕ್'ಗಳ ಸ್ಥಾಪನೆ - ಈ ಬಾರಿಯ ರಾಜ್ಯ ಬಜೆಟ್ನಲ್ಲಿ ಆರೋಗ್ಯ ಕ್ಷೇತ್ರದ ಮೇಲೆ ಪ್ರಮುಖ ಕೊಡುಗೆಯಾಗಿದೆ.
Karnataka Budget health
'ಎಲ್ಲರಿಗೂ ಆರೋಗ್ಯ, ಎಲ್ಲೆಡೆ ಆರೋಗ್ಯ' ಎಂಬ ಧ್ಯೇಯದೊಂದಿಗೆ ಆರೋಗ್ಯ ಕ್ಷೇತ್ರಕ್ಕೆ ನೀಡಲಾಗುತ್ತಿರುವ ಕೊಡುಗೆಗಳನ್ನು ಸಿಎಂ ಬೊಮ್ಮಾಯಿ ವಿವರಿಸಿದರು. ಈ ಬಾರಿಯ ಬಜೆಟ್ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಏನೆಲ್ಲಾ ಕೊಡುಗೆಗನ್ನು ನೀಡಲಾಗಿದೆ ಎಂಬುದು ಈ ಕೆಳಕಂಡಂತಿದೆ.
- ಬೆಂಗಳೂರಿನ ಎಲ್ಲ ವಾರ್ಡ್‌ಗಳಲ್ಲಿ ಹಾಗೂ ಪ್ರಮುಖ ನಗರಗಳಲ್ಲಿ ಸಾಂಕ್ರಾಮಿಕವಲ್ಲದ ರೋಗಗಳ ತಪಾಸಣೆಗಾಗಿ 438 'ನಮ್ಮ ಕ್ಲಿನಿಕ್'ಗಳ ಸ್ಥಾಪನೆ
- 300 ಮಹಿಳಾ ಸ್ವಾಸ್ಥ್ಯ ಕೇಂದ್ರಗಳ ಸ್ಥಾಪನೆ
- ಬಡ-ಹಿರಿಯ ನಾಗರಿಕರಿಗೆ ಉಚಿತ ನೇತ್ರ ತಪಾಸಣೆ, ಶಸ್ತ್ರ ಚಿಕಿತ್ಸೆ ಹಾಗೂ ಕನ್ನಡಕ ಸೌಲಭ್ಯ
- ಏಳು ತಾಲೂಕು ಆಸ್ಪತ್ರೆಗಳನ್ನು 100 ಹಾಸಿಗೆಗಳ ಆಸ್ಪತ್ರೆಗಳಾಗಿ ಮೇಲ್ದರ್ಜೆಗೆ ಏರಿಕೆ
- ತುಮಕೂರಿನಲ್ಲಿ 20 ಕೋಟಿ ರೂಪಾಯಿ ವೆಚ್ಚದಲ್ಲಿ ಟ್ರಾಮಾ ಕೇರ್ ಕೇಂದ್ರ
- ಬೆಳಗಾವಿಯಲ್ಲಿ 50 ಕೋಟಿ ರೂಪಾಯಿ ವೆಚ್ಚದಲ್ಲಿ ಕಿದ್ವಾಯಿ ಪ್ರಾದೇಶಿಕ ಕ್ಯಾನ್ಸರ್ ಕೇಂದ್ರ
- ಚಿತ್ರದುರ್ಗದಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆ
ಇದನ್ನೂ ಓದಿ: ವಿಧಾನಸೌಧದ ಮೇಲೆ ಹಾರಿದ ಜೆಟ್: ಆಗಸದಲ್ಲಿ ಮೊದಲ ಬಾರಿಗೆ ಬಜೆಟ್ ಪ್ರಚಾರ!