ಕರ್ನಾಟಕ

karnataka

ETV Bharat / city

ಸಚಿವ ಈಶ್ವರಪ್ಪ ರಾಜೀನಾಮೆಗೆ ಪಟ್ಟು: ಸದನದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಕೈ ಶಾಸಕರು

ಸದನ ಮುಂದೂಡಿಕೆಯಾದ್ರೂ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್​ ಶಾಸಕರು ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ. ಸಿಎಂ ಬೊಮ್ಮಾಯಿ ಮನವೊಲಿಕೆಗೆ ಯತ್ನಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.

ಕೈ ಶಾಸಕರ ಅಹೋರಾತ್ರಿ ಧರಣಿ ಆರಂಭ
ಕೈ ಶಾಸಕರ ಅಹೋರಾತ್ರಿ ಧರಣಿ ಆರಂಭ

By

Published : Feb 17, 2022, 4:52 PM IST

Updated : Feb 18, 2022, 12:25 AM IST

ಬೆಂಗಳೂರು:ಕೇಸರಿ ಧ್ವಜವನ್ನು ಮುಂದೊಂದು ದಿನ ಕೆಂಪುಕೋಟೆ ಮೇಲೆ ಹಾರಿಸಲಾಗುವುದು ಎಂದು ಹೇಳಿಕೆ ನೀಡಿದ್ದ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಸದನದಲ್ಲೇ ಕಾಂಗ್ರೆಸ್​ ಶಾಸಕರು ತಮ್ಮ ಅಹೋರಾತ್ರಿ ಪ್ರತಿಭಟನೆ ಪ್ರಾರಂಭಿಸಿದ್ದಾರೆ.

ಮಧ್ಯಾಹ್ನದ ಭೋಜನದ ಬಳಿಕ ವಿಧಾನನಸಭೆ ಕಲಾಪ ಪ್ರಾರಂಭವಾಗುತ್ತಿದ್ದ ಹಾಗೆಯೇ ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ಮುಂದುವರಿಸಿದರು. ಬಳಿಕ ಸ್ಪೀಕರ್ ನಾಳೆ ಬೆಳಗ್ಗೆ 11 ಗಂಟೆಗೆ ಸದನ ಕಲಾಪವನ್ನು ಮುಂದೂಡಿದರು. ಇತ್ತ ಸದನ ಮುಂದೂಡಿಕೆಯಾದ್ರೂ ಕೈ ಶಾಸಕರು ತಮ್ಮ ಧರಣಿ ಮುಂದುವರಿಸಿದ್ದಾರೆ.

ಧರಣಿಗೆ ಕೂತ ಕೈ ಶಾಸಕರ ಮನವೊಲಿಕೆಗೆ ಸಿಎಂ ಬೊಮ್ಮಾಯಿ ಯತ್ನಿಸಿದರು. ಅಹೋರಾತ್ರಿ ಧರಣಿ ಕೈಬಿಡಿ, ನಾಳೆ ಬಳೆಗ್ಗೆ ಕಲಾಪ ಆರಂಭವಾದ ಬಳಿಕ ಧರಣಿ ಮುಂದುವರಿಸಿ ಎಂದು ಮನವಿ ಮಾಡಿದರು. ಆದರೆ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅಹೋರಾತ್ರಿ ಪ್ರತಿಭಟನೆ ಕೈ ಬಿಡಲು ನಿರಾಕರಿಸಿದರು.

ಇದನ್ನೂ ಓದಿ: ಮಹಾತ್ಮ ಗಾಂಧೀಜಿ ಇದ್ದಾಗ ಇದ್ದಿದ್ದು ಬೇರೆ ಕಾಂಗ್ರೆಸ್, ಈಗ ಇರೋದ್ ನಕಲಿ ಕಾಂಗ್ರೆಸ್: ಆರ್.ಅಶೋಕ್

ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ಹಾಗೂ ದೇಶದ್ರೋಹ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಶಾಸಕರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಈ ಮುಂಚೆ ನಿರ್ಧರಿಸಿದಂತೆ ಕಾಂಗ್ರೆಸ್​​ನ ಎಲ್ಲಾ ಶಾಸಕರು ಸದನದಲ್ಲೇ ಕೂತು ಪ್ರತಿಭಟನೆ ನಡೆಸುತ್ತಿದ್ದಾರೆ. 69 ಕೈ ಶಾಸಕರೂ ಸದನದಲ್ಲೇ ಉಳಿಯುವಂತೆ ಸಿದ್ದರಾಮಯ್ಯ ಸೂಚನೆ ನೀಡಿದರು.‌ ಯಾರೆಲ್ಲಾ ಹೊರಕ್ಕೆ ಹೋಗಿದ್ದಾರೆ ಅವರೆಲ್ಲರನ್ನೂ ಸದನದ ಒಳಕ್ಕೆ ಕರೆಸುವಂತೆ ಸೂಚಿಸಿದರು.

ಧರಣಿ ನಿರತರಿಗೆ ಭೋಜನ, ಹಾಸಿಗೆ ವ್ಯವಸ್ಥೆ: ಕಾಂಗ್ರೆಸ್ ಶಾಸಕರು ಸದನದಲ್ಲೇ ಅಹೋರಾತ್ರಿ ಧರಣಿ ಮಾಡುತ್ತಿರುವ ಹಿನ್ನೆಲೆ ಎಲ್ಲ ವ್ಯವಸ್ಥೆ ಕಲ್ಪಿಸುವಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿಗೆ ಮನವಿ ಮಾಡಿದರು. ಇದಕ್ಕೆ ಸಮ್ಮತಿ ಸೂಚಿಸಿದ ವಿಧಾನಸಭೆ ಕಾರ್ಯದರ್ಶಿ ವಿಶಾಲಕ್ಷಿ ಅಧಿಕಾರಿಗಳಿಗೆ ಎಲ್ಲ ವ್ಯವಸ್ಥೆ ಕಲ್ಪಿಸಲು ಸೂಚನೆ ನೀಡಿದರು. ಧರಣಿನಿರತ ಶಾಸಕರಿಗೆ ರಾತ್ರಿಗೆ ಸಸ್ಯಾಹಾರಿ ಊಟ, ಹಾಸಿಗೆ, ಟೀ-ಕಾಫಿ ವ್ಯವಸ್ಥೆ ಮಾಡಲಾಗುತ್ತದೆ ಎಂದು ವಿಶಾಲಾಕ್ಷಿ ತಿಳಿಸಿದರು.

Last Updated : Feb 18, 2022, 12:25 AM IST

ABOUT THE AUTHOR

...view details