ಬೆಂಗಳೂರು:ರಾಜ್ಯದಲ್ಲಿಂದು 4,234 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, 18 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ.
ಇಂದು 1,599 ಮಂದಿ ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 30,865 ಕ್ಕೆ ಏರಿಕೆಯಾಗಿದೆ. ಈವರೆಗೆ ಒಟ್ಟು 9,57,769 ಮಂದಿ ಆಸ್ಪತ್ರೆಗಳಿಂದಬಿಡುಗಡೆಯಾಗಿದ್ದಾರೆ. ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 10,01,238 ಕ್ಕೆ ಏರಿಕೆಯಾಗಿದೆ. ಮೃತಪಟ್ಟವರ ಸಂಖ್ಯೆ 12,585 ಕ್ಕೆ ಏರಿಕೆಯಾಗಿದೆ. ಐಸಿಯುನಲ್ಲಿ 265 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.