ಬೆಂಗಳೂರು:ರಾಜ್ಯದಲ್ಲಿ ಇಂದು ಹೊಸತಾಗಿ 445 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 11,005ಕ್ಕೇರಿಕೆಯಾಗಿದೆ.
ಇಂದು ಹತ್ತು ಮಂದಿಯನ್ನು ಕೋವಿಡ್ ಬಲಿತೆಗೆದುಕೊಂಡಿದ್ದು, ಕೋವಿಡ್ಗೆ ಮೃತಪಟ್ಟವರ ಸಂಖ್ಯೆ 180ಕ್ಕೆ ಏರಿಕೆಯಾಗಿದೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 178ಕ್ಕೆ ಏರಿಕೆಯಾಗಿದೆ.
ಇಂದು ಒಂದೇ ದಿನ 246 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಸದ್ಯ ರಾಜ್ಯದಲ್ಲಿ ಈವರೆಗೆ 6,916 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 3,905 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ನಡೆಯುತ್ತಿದೆ.