ಬೆಂಗಳೂರು: ರಾಜ್ಯದಲ್ಲಿಂದು 59,144 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 224 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 29,89,713ಕ್ಕೆ ಏರಿಕೆ ಆಗಿದೆ.
ಇಂದು 317 ಮಂದಿ ಡಿಸ್ಚಾರ್ಜ್ ಆಗಿದ್ದು, ಈ ಮೂಲಕ ಒಟ್ಟು 29,43,487 ಜನ ಗುಣಮುಖರಾಗಿದ್ದಾರೆ. ಐವರು ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 38,107 ಕ್ಕೆ ಏರಿಕೆ ಆಗಿದೆ. ಸದ್ಯ 8,090 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರ ಪ್ರಮಾಣ ಶೇ.0.37 ರಷ್ಟಿದೆ. ಸಾವಿನ ಪ್ರಮಾಣ ಶೇ.2.23 ರಷ್ಟಿದೆ. ಇನ್ನು ವಿಮಾನ ನಿಲ್ದಾಣದಿಂದ 7166 ಪ್ರಯಾಣಿಕರು ಕೋವಿಡ್ ತಪಾಸಣೆಗೆ ಒಳಪಟ್ಟಿದ್ದರೆ, 682 ಪ್ರಯಾಣಿಕರು ಯುಕೆಯಿಂದ ಆಗಮಿಸಿದ್ದಾರೆ.