ಬೆಂಗಳೂರು: ರಾಜ್ಯದಲ್ಲಿಂದು 97,782 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 270 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 30,04,239 ಕ್ಕೆ ಏರಿಕೆ ಆಗಿದೆ.
ಇನ್ನು 246 ಮಂದಿ ಗುಣಮುಖರಾಗಿದ್ದು, ಈವರೆಗೆ 29,58,630 ಡಿಸ್ಚಾರ್ಜ್ ಆಗಿದ್ದಾರೆ. ನಾಲ್ವರು ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 38,309ಕ್ಕೆ ಏರಿಕೆ ಕಂಡಿದೆ. ಸದ್ಯ ಸಕ್ರಿಯ ಪ್ರಕರಣಗಳು 7,271 ಕ್ಕೆ ಏರಿಕೆ ಆಗಿವೆ. ಈ ಮೂಲಕ ಸೋಂಕಿತರ ಪ್ರಮಾಣ ಶೇ.0.27 ರಷ್ಟಿದ್ದು, ಸಾವಿನ ಪ್ರಮಾಣ ಶೇ.1.48 ರಷ್ಟು ಇದೆ. ವಿಮಾನ ನಿಲ್ದಾಣದಲ್ಲಿ 1,986 ಪ್ರಯಾಣಿಕರು ತಪಾಸಣೆಗೊಳ್ಳಲ್ಪಟ್ಟಿದ್ದು, ಹೈರಿಸ್ಕ್ ದೇಶಗಳಿಂದ 830 ಪ್ರಯಾಣಿಕರು ಆಗಮಿಸಿದ್ದಾರೆ.
(ಇದನ್ನೂ ಓದಿ: ಜನವರಿ ಅಂತ್ಯದ ವೇಳೆಗೆ ಭಾರತದಲ್ಲಿ ಮತ್ತೆ ಕೋವಿಡ್ ಉಲ್ಬಣಿಸಲಿದೆ: ಕಿಮ್ಸ್ ಹೈದರಾಬಾದ್ ನಿರ್ದೇಶಕ)