ಬೆಂಗಳೂರು:ರಾಜ್ಯದಲ್ಲಿಂದು 1,14,559 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 405 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 30,03,969 ಕ್ಕೆ ಏರಿಕೆ ಆಗಿದೆ. ಇನ್ನು 267 ಮಂದಿ ಗುಣಮುಖರಾಗಿದ್ದು, ಈವರೆಗೆ 29,58,384 ಡಿಸ್ಚಾರ್ಜ್ ಆಗಿದ್ದಾರೆ.
ಇಂದು ನಾಲ್ವರು ಸೋಂಕಿತರು ಮೃತಪಟ್ಟಿದ್ದು, 38,305ಕ್ಕೆ ಸಾವಿನ ಸಂಖ್ಯೆ ಏರಿದೆ. ಸದ್ಯ ಸಕ್ರಿಯ ಪ್ರಕರಣಗಳು 7,251 ಕ್ಕೆ ಏರಿಕೆ ಕಂಡಿವೆ. ಈ ಮೂಲಕ ಸೋಂಕಿತರ ಪ್ರಮಾಣ ಶೇ 0.35 ರಷ್ಟು ಇದ್ದು, ಸಾವಿನ ಪ್ರಮಾಣ ಶೇ.0.98 ರಷ್ಟಿದೆ. ವಿಮಾನ ನಿಲ್ದಾಣದಲ್ಲಿ 1,636 ಪ್ರಯಾಣಿಕರು ತಪಾಸಣೆಗೊಳಪಟ್ಟಿದ್ದು, ಹೈರಿಸ್ಕ್ ದೇಶಗಳಿಂದ 117 ಪ್ರಯಾಣಿಕರು ಆಗಮಿಸಿದ್ದಾರೆ.