ಬೆಂಗಳೂರು:ರಾಜ್ಯದಲ್ಲಿಂದು 365 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. 8 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ. ಇಂದು 443 ಮಂದಿ ಗುಣಮುಖರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
COVID Report: ರಾಜ್ಯದಲ್ಲಿಂದು 365 ಹೊಸ ಕೇಸ್, 8 ಸೋಂಕಿತರ ಸಾವು - ಕೊರೊನಾ ಬುಲೆಟಿನ್
ಕರ್ನಾಟಕದಲ್ಲಿ ಇಂದು 365 ಜನರಿಗೆ ಕೊರೊನಾ ದೃಢಪಟ್ಟಿದ್ದು, 8 ಸೋಂಕಿತರು ಮೃತಪಟ್ಟಿದ್ದಾರೆ.
covid
ಸದ್ಯ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 8,988 ಇದೆ. ಈವರೆಗೆ ಒಟ್ಟು 29,37,848 ಮಂದಿ ಬಿಡುಗಡೆಯಾಗಿದ್ದಾರೆ. ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 29,84,849 ಕ್ಕೆ ಏರಿಕೆಯಾಗಿದೆ. ಮೃತಪಟ್ಟವರ ಸಂಖ್ಯೆ 37,984 ಕ್ಕೆ ಏರಿಕೆಯಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.