ಕರ್ನಾಟಕ

karnataka

ETV Bharat / city

ರಾಜ್ಯದಲ್ಲಿಂದು 1240 ಮಂದಿಗೆ ಸೋಂಕು.. 6 ಜನ ಕೋವಿಡ್​​ಗೆ ಬಲಿ - ಕರ್ನಾಟಕ ಕೋವಿಡ್ ವರದಿ

ಇಂದು 792 ಮಂದಿ ಬಿಡುಗಡೆಗೊಂಡಿದ್ದಾರೆ. ಈವರೆಗೆ ಒಟ್ಟು 3,65,579 ಮಂದಿ ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಕೂಡ ಇಳಿಕೆಯಾಗಿದ್ದು, 10,422 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಲ್ಕು ಮಂದಿ ಮೃತಪಟ್ಟಿದ್ದು, ಕೋವಿಡ್ ಸೋಂಕಿನಿಂದ 4245 ಮಂದಿ ಈವರೆಗೆ ಅಸುನೀಗಿದ್ದಾರೆ..

karnataka-covid-bulletin
ಕರ್ನಾಟಕ ಕೋವಿಡ್ ವರದಿ

By

Published : Dec 16, 2020, 6:47 PM IST

ಬೆಂಗಳೂರು :ರಾಜ್ಯದಲ್ಲಿಂದು 1240 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 9,04,665ಕ್ಕೆ ಏರಿದೆ. ಇಂದು ಸೋಂಕಿಗೆ 6 ಜನ ಮೃತಪಟ್ಟಿದ್ದರಿಂದ ಒಟ್ಟು ಸಾವಿನ ಸಂಖ್ಯೆ 11,971ಕ್ಕೆ ಏರಿಕೆಯಾಗಿದೆ.

19 ಸೋಂಕಿತರು ಅನ್ಯ ಕಾರಣಕ್ಕೆ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಸೋಂಕಿತರ ಪ್ರಮಾಣ ಶೇ.1.21ರಷ್ಟು ಹಾಗೂ ಸಾವಿನ ಪ್ರಮಾಣ ಶೇ.0.48ರಷ್ಟು ಇದೆ. ಕೊರೊನಾದಿಂದ 1403 ಸೋಂಕಿತರು ಗುಣಮುಖರಾಗಿದ್ದಾರೆ. ಈವರೆಗೆ 8,77,199 ಮಂದಿ ಡಿಸ್ಜಾರ್ಜ್ ಆಗಿದ್ದಾರೆ.

248 ಸೋಂಕಿತರು ತೀವ್ರ ನಿಗಾ ಘಟಕದಲ್ಲಿದ್ದು, ರಾಜ್ಯದಲ್ಲಿ ಸದ್ಯ 15,476 ಸಕ್ರಿಯ ಪ್ರಕರಣಗಳಿವೆ. ಕಳೆದ 7 ದಿನಗಳಲ್ಲಿ 20,029 ಜನ ಹೋಂ ಕ್ವಾರಂಟೈನ್​​ನಲ್ಲಿದ್ದಾರೆ. ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿ 83,761, ದ್ವಿತೀಯ ಸಂಪರ್ಕದಲ್ಲಿ 92,294 ಜನರಿದ್ದಾರೆ.

ಬೆಂಗಳೂರಿನಲ್ಲಿ 676 ಪಾಸಿಟಿವ್, ನಾಲ್ವರು ಬಲಿ :ನಗರದಲ್ಲಿಂದು 676 ಮಂದಿಯಲ್ಲಿ ಪಾಸಿಟಿವ್ ಕಂಡು ಬಂದಿದ್ದು, ನಾಲ್ಕು ಜನ ಮೃತಪಟ್ಟಿದ್ದಾರೆ. ಸೋಂಕಿತರ ಒಟ್ಟು ಸಂಖ್ಯೆ 3,80,247ಕ್ಕೆ ಏರಿಕೆಯಾಗಿದೆ.

ಇಂದು 792 ಮಂದಿ ಬಿಡುಗಡೆಗೊಂಡಿದ್ದಾರೆ. ಈವರೆಗೆ ಒಟ್ಟು 3,65,579 ಮಂದಿ ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಕೂಡ ಇಳಿಕೆಯಾಗಿದ್ದು, 10,422 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಲ್ಕು ಮಂದಿ ಮೃತಪಟ್ಟಿದ್ದು, ಕೋವಿಡ್ ಸೋಂಕಿನಿಂದ 4245 ಮಂದಿ ಈವರೆಗೆ ಅಸುನೀಗಿದ್ದಾರೆ.

ABOUT THE AUTHOR

...view details