ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಆರ್ಭಟ ಮಾತ್ರ ಮುಂದುವರೆದಿದೆ. ಆರು ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಬರೋಬ್ಬರಿ 1,89, 499 ಜನರಿಗೆ ಕೊರೊನಾ ಪರೀಕ್ಷೆ ನಡೆಸಿದ್ದು, ಇದರಲ್ಲಿ 12,000 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 30,51,958 ಏರಿಕೆ ಆಗಿದೆ.
ಇನ್ನು 901 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ 29,63,957 ಡಿಸ್ಚಾರ್ಜ್ ಆಗಿದ್ದಾರೆ. ಇಂದು ನಾಲ್ವರು ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 38,370ಕ್ಕೆ ಏರಿಕೆ ಆಗಿದೆ. ಇತ್ತ ಸಕ್ರಿಯ ಪ್ರಕರಣಗಳು ಏರಿಕೆಯಾಗುತ್ತಲೇ ಇದ್ದು ಸದ್ಯ 49,602 ರಷ್ಟಿವೆ. ಇವತ್ತಿನ ಪಾಸಿಟಿವ್ ಪ್ರಮಾಣ ಶೇ.6.33 ರಷ್ಟಿದ್ದರೆ ಸಾವಿನ ಪ್ರಮಾಣ 0.03 ರಷ್ಟಿದೆ. ವಿಮಾನ ನಿಲ್ದಾಣದಿಂದ ಆಗಮಿಸಿರುವ 4,213 ಪ್ರಯಾಣಿಕರು ತಪಾಸಣೆಗೆ ಒಳಪಟ್ಟಿದ್ದಾರೆ. ಹೈರಿಸ್ಕ್ ದೇಶದಿಂದ 1041 ಪ್ರಯಾಣಿಕರು ಆಗಮಿಸಿದ್ದಾರೆ.
ಬೆಂಗಳೂರು ರೆಡ್ ಝೋನ್:
ರೆಡ್ ಝೋನ್ ಆಗಿರುವ ರಾಜಧಾನಿ ಬೆಂಗಳೂರಲ್ಲಿ ಇಂದು 9020 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 12,99,319 ಕ್ಕೆ ಏರಿದೆ. 605 ಜನರು ಡಿಸ್ಚಾರ್ಜ್ ಆಗಿದ್ದು, ಈವರೆಗೆ ಒಟ್ಟು 12,42,326 ಮಂದಿ ಗುಣಮುಖರಾಗಿದ್ದಾರೆ. ಇಬ್ಬರು ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 16,422ಕ್ಕೆ ಏರಿದೆ. ಸದ್ಯ 40,570 ಸಕ್ರಿಯ ಪ್ರಕರಣಗಳಿವೆ.
ಈವರೆಗಿನ ರೂಪಾಂತರಿ ಅಪ್ಡೇಟ್ಸ್:
ಅಲ್ಪಾ - 156