ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಆರ್ಭಟ ಮುಂದುವರೆದಿದೆ. 1,64,261 ಜನರಿಗೆ ಕೊರೊನಾ ಪರೀಕ್ಷೆ ನಡೆಸಿದ್ದು, ಇದರಲ್ಲಿ 8906 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 30,39,958 ಏರಿಕೆ ಆಗಿದೆ.
ಇಂದು 508 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ ಒಟ್ಟು 29,63,056 ಡಿಸ್ಚಾರ್ಜ್ ಆಗಿದ್ದಾರೆ. ಇಂದು ರಾಜ್ಯಾದ್ಯಂತ ನಾಲ್ವರು ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 38,366ಕ್ಕೆ ಏರಿದೆ. ಇತ್ತ ಸಕ್ರಿಯ ಪ್ರಕರಣಗಳು ಏರಿಕೆಯಾಗುತ್ತಲೇ ಇದ್ದು, ಸದ್ಯ 38,507 ರಷ್ಟಿದೆ. ಇಂದಿನ ಪಾಸಿಟಿವಿಟಿ ದರ ಶೇ.5.42 ರಷ್ಟಿದ್ದರೆ, ಸಾವಿನ ಪ್ರಮಾಣ ಶೇ.0.04 ರಷ್ಟಿದೆ.
Bengaluru COVID:
ರೆಡ್ ಝೋನ್ ಆಗಿರುವ ರಾಜಧಾನಿ ಬೆಂಗಳೂರಲ್ಲಿ 7113 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 12,90,299 ಕ್ಕೆ ಏರಿದೆ. 323 ಜನರು ಡಿಸ್ಚಾರ್ಜ್ ಆಗಿದ್ದು, ಒಟ್ಟು 12,41,721 ಸೋಂಕಿತರು ಗುಣಮುಖರಾಗಿದ್ದಾರೆ. ಮೂವರು ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 16,420 ಕ್ಕೆ ಏರಿದೆ. ನಗರದಲ್ಲಿ ಸದ್ಯ 32,157 ಸಕ್ರಿಯ ಪ್ರಕರಣಗಳಿವೆ.