ಬೆಂಗಳೂರು:ರಾಜ್ಯದಲ್ಲಿಂದು 18,579 ಮಂದಿಗೆ ಕೊರೊನಾ ಪರೀಕ್ಷೆ ನಡೆಸಿದ್ದು, ಇದರಲ್ಲಿ 241 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 39,51,739 ಕ್ಕೆ ಏರಿಕೆ ಆಗಿದೆ. ಪಾಸಿಟಿವ್ ದರವೂ ಶೇ.1.29 ಕ್ಕೆ ಏರಿಕೆ ಕಂಡಿದೆ. ಇತ್ತ 98 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 39,09,592 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಸೋಂಕಿನಿಂದ ಇಂದು ಮೃತಪಟ್ಟ ಬಗ್ಗೆ ಯಾವುದೇ ವರದಿಯಾಗಿಲ್ಲ. ಸಾವಿನ ಸಂಖ್ಯೆ ಸದ್ಯ 40,064 ರಷ್ಟಿದೆ. ಸದ್ಯ ಸಕ್ರಿಯ ಪ್ರಕರಣಗಳು 2041 ರಷ್ಟಿವೆ. ವಿಮಾನ ನಿಲ್ದಾಣದಲ್ಲಿ 5497 ಜನರನ್ನು ತಪಾಸಣೆಗೆ ಒಳಪಡಿಸಲಾಗಿದೆ. ಬೆಂಗಳೂರಲ್ಲಿಂದು 232 ಮಂದಿಗೆ ಸೋಂಕು ತಗುಲಿದ್ದು, ಈವರೆಗಿನ ಸೋಂಕಿತರ ಸಂಖ್ಯೆ 17,87,380 ಕ್ಕೆ ಏರಿಕೆ ಆಗಿದೆ. ಇಂದು 93 ಮಂದಿ ಡಿಸ್ಚಾರ್ಜ್ ಆಗಿದ್ದು, ಈವರೆಗೆ 17,68,473 ಜನ ಗುಣಮುಖರಾಗಿದ್ದಾರೆ. ಸದ್ಯ ಸಾವಿನ ಸಂಖ್ಯೆ 16,963 ರಷ್ಟಿದ್ದು, ಸಕ್ರಿಯ ಪ್ರಕರಣಗಳು 1,943 ರಷ್ಟಿವೆ.