ಕರ್ನಾಟಕ

karnataka

ETV Bharat / city

COVID: ರಾಜ್ಯದಲ್ಲಿಂದು 306 ಮಂದಿಗೆ ಕೋವಿಡ್‌ ಸೋಂಕು, ಇಬ್ಬರು ಬಲಿ - ಕರ್ನಾಟದ ಕೊರೊನಾ ಸಾವು ಪ್ರಕರಣಗಳು

ರಾಜ್ಯದಲ್ಲಿಂದು 306 ಜನರಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.

Karnataka Covid Report,ಕರ್ನಾಟಕ ಕೊರೊನಾ ಅಪ್​ಡೇಟ್
COVID

By

Published : Nov 25, 2021, 8:30 PM IST

ಬೆಂಗಳೂರು: ರಾಜ್ಯದಲ್ಲಿಂದು 84,513 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 306 ಮಂದಿಗೆ COVID ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 29,94,561 ಕ್ಕೆ ಏರಿಕೆ ಆಗಿದೆ. ಇತ್ತ 224 ಮಂದಿ ಡಿಸ್ಚಾರ್ಜ್ ಆಗಿದ್ದು, ಈವರೆಗೆ ಒಟ್ಟು 29,49,853 ಮಂದಿ ಗುಣಮುಖರಾಗಿದ್ದಾರೆ.

ಇಂದು ಇಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 38,187ಕ್ಕೆ ಏರಿದೆ. ಸದ್ಯ 6,492 ಸಕ್ರಿಯ ಪ್ರಕರಣಗಳಿವೆ. ಈ ಮೂಲಕ ಸೋಂಕಿತರ ಪ್ರಮಾಣ ಶೇ.0.36 ರಷ್ಟಿದ್ದರೆ, ಸಾವಿನ ಪ್ರಮಾಣ ಶೇ.0.65 ರಷ್ಟಿದೆ. ವಿಮಾನ ನಿಲ್ದಾಣದಿಂದ 2555 ಪ್ರಯಾಣಿಕರು ಆಗಮಿಸಿದ್ದು, ಕೋವಿಡ್ ತಪಾಸಣೆಗೆ ಒಳಪಟ್ಟಿದ್ದಾರೆ. 358 ಪ್ರಯಾಣಿಕರು ಯುಕೆಯಿಂದ ಆಗಮಿಸಿದ್ದಾರೆ.

ಇನ್ನು ರಾಜಧಾನಿ ಬೆಂಗಳೂರಲ್ಲಿ 171 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 12,55,611ಕ್ಕೆ ಏರಿದೆ. ಇಂದು 147 ಜನರು ಗುಣಮುಖರಾಗಿದ್ದು, ಈವರೆಗೆ 12,34,143 ಡಿಸ್ಚಾರ್ಜ್ ಆಗಿದ್ದಾರೆ. ಇಂದು ಯಾವುದೇ ಸಾವಿನ ಪ್ರಕರಣ ವರದಿಯಾಗಿಲ್ಲ. ಇನ್ನು 5141 ಸಕ್ರಿಯ ಪ್ರಕರಣಗಳು ಇವೆ.

ರೂಪಾಂತರಿ ಅಪ್​ಡೇಟ್​:
ಅಲ್ಫಾ - 155
ಬೆಟಾ - 08
ಡೆಲ್ಟಾ - 1698
ಡೆಲ್ಟಾ ಸಬ್ ಲೈನ್ಏಜ್ - 300
ಕಪ್ಪಾ - 160
ಈಟಾ - 01

ABOUT THE AUTHOR

...view details