ಬೆಂಗಳೂರು:ರಾಜ್ಯದಲ್ಲಿಂದು 1,20,073 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 371 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 29,85,598ಕ್ಕೆ ಏರಿಕೆ ಆಗಿದೆ. ಇತ್ತ 342 ಮಂದಿ ಡಿಸ್ಚಾರ್ಜ್ ಆಗಿದ್ದು, 29,38,653 ಸೋಂಕಿತರು ಗುಣಮುಖರಾಗಿದ್ದಾರೆ.
ಇಂದು 7 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 38,002ಕ್ಕೆ ಏರಿಕೆ ಆಗಿದೆ. ಸದ್ಯ ಸಕ್ರಿಯ ಪ್ರಕರಣಗಳು 8,914 ರಷ್ಟಿದೆ. ಈ ಮೂಲಕ ಸೋಂಕಿತರ ಪ್ರಮಾಣ ಶೇ.0.30 ರಷ್ಟಿದ್ದರೆ ಸಾವಿನ ಪ್ರಮಾಣ ಶೇ.1.88 ರಷ್ಟಿದೆ. ವಿಮಾನ ನಿಲ್ದಾಣದಲ್ಲಿ 1,385 ಪ್ರಯಾಣಿರಕನ್ನ ತಪಾಸಣೆಗೆ ಒಳಪಡಿಸಲಾಗಿದೆ. ಯುಕೆಯಿಂದ ಇಂದು 343 ಅಂತಾರಾಷ್ಟ್ರೀಯ ಪ್ರಯಾಣಿಕರು ಆಗಮಿಸಿದ್ದಾರೆ.