ಬೆಂಗಳೂರು: ಕೇಂದ್ರ ಸರ್ಕಾರದಿಂದ 2022-2023ನೇ ಸಾಲಿನಲ್ಲಿ ರಾಜ್ಯ ಸರ್ಕಾರವು ಹೊಸದಾಗಿ 72 ಸಾವಿರ ಕೋಟಿ ರೂ. ಸಾಲ ಪಡೆಯಲು ನಿರ್ಧರಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.
ಕೇಂದ್ರ ಸರ್ಕಾರವು ಕಳೆದ ಎರಡು ವರ್ಷಗಳಲ್ಲಿ ಹೆಚ್ಚುವರಿ ಸಾಲವನ್ನು ಅನುಮತಿಸಿದಾಗ ನಾವು ಸಾಲವನ್ನು ನಿಯಂತ್ರಣದಲ್ಲಿಡುವಲ್ಲಿ ಯಶಸ್ವಿಯಾಗಿದ್ದೇವೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಆಯವ್ಯಯದ 67 ಸಾವಿರ ಕೋಟಿ ರೂ. ಬದಲಿಗೆ 63,100 ಕೋಟಿಗೆ ಸಾಲವನ್ನು ನಿರ್ಬಂಧಿಸಲಾಗಿದೆ ಎಂದು ಸಿಎಂ ಹೇಳಿದ್ದಾರೆ. ಇದೇ ವೇಳೆ, 2022-2023ನೇ ಸಾಲಿಗೆ 72 ಸಾವಿರ ಕೋಟಿ ರೂ. ಸಾಲವನ್ನು ಪಡೆಯಲು ಯೋಜಿಸಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ಬಜೆಟ್ ಭಾಷಣದಲ್ಲಿ ಪ್ರಸ್ತಾಪಿಸಿದ್ದಾರೆ.