ಕರ್ನಾಟಕ

karnataka

ETV Bharat / city

ಯುಜಿ - ನೀಟ್ ಪ್ರವೇಶಾತಿ ಮಾಹಿತಿ ಪ್ರಕಟಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ

2021ನೇ ಸಾಲಿನ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್‌ ಕೋರ್ಸ್‌ಗಳ ಪ್ರವೇಶಕ್ಕಾಗಿ ವೇಳಾಪಟ್ಟಿ ಮತ್ತು ಶುಲ್ಕದ ಮಾಹಿತಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದ್ದು, ವಿದ್ಯಾರ್ಥಿಗಳು ಆದ್ಯತಾ ಕ್ರಮದಲ್ಲಿ ಇಚ್ಛೆ ದಾಖಲಿಸಬಹುದಾಗಿದೆ.

Karnataka Examinations Authority
ಕರ್ನಾಟಕ ಪರೀಕ್ಷಾ ಪ್ರಾಧಿಕಾರ

By

Published : Feb 1, 2022, 2:16 PM IST

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 2021ನೇ ಸಾಲಿನ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್‌ ಕೋರ್ಸ್‌ಗಳ ಪ್ರವೇಶಕ್ಕಾಗಿ ವೇಳಾಪಟ್ಟಿ ಮತ್ತು ಶುಲ್ಕದ ಮಾಹಿತಿ ಪ್ರಕಟಿಸಿದೆ.

ವಿದ್ಯಾರ್ಥಿಗಳು ಆದ್ಯತಾ ಕ್ರಮದಲ್ಲಿ ಇಚ್ಛೆಯನ್ನು ದಾಖಲಿಸಬಹುದಾಗಿದೆ. ನೈಜ ಸೀಟು ಹಂಚಿಕೆಯ ಫಲಿತಾಂಶವನ್ನು ಬುಧವಾರ (ಫೆಬ್ರವರಿ 2) ಖಾಸಗಿ ಹಾಗೂ ಡೀಮ್ಸ್ ವಿವಿಗಳಲ್ಲಿ ಪದವಿ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶ ಶುಲ್ಕದ ವಿವರಗಳನ್ನು ಕೆಇಎ ಪ್ರಕಟಿಸಿದೆ.

ಇದನ್ನೂ ಓದಿ: ಸೇನೆಯ ನೂತನ ಉಪ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿದ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ

ಈ ಹಿಂದೆ ಖಾಸಗಿ ವೈದ್ಯಕೀಯ ಕಾಲೇಜಿನ ಆಡಳಿತ ಮಂಡಳಿ ಮತ್ತು ಸರ್ಕಾರದ ನಡುವೆ ನಡೆದ ಸಭೆಯ ಪ್ರಕಾರ ವೈದ್ಯ ಹಾಗೂ ದಂತ ವೈದ್ಯಕೀಯ ಪದವಿ ಕೋರ್ಸ್ ಪ್ರವೇಶಕ್ಕೆ ಸರ್ಕಾರಿ ಕೋಟಾ ಸೀಟುಗಳ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡದಿರಲು ನಿರ್ಧರಿಸಲಾಗಿದೆ.

ಖಾಸಗಿ ಕೋಟಾ ಸೀಟುಗಳಿಗೆ 18- 20 ಲಕ್ಷ ರೂ., ಎನ್‌ಆರ್‌ಐ ಕೋಟಾ ಸೀಟುಗಳಿಗೆ 32 ಲಕ್ಷ ರೂ.ಗಳಿಂದ 34 ಲಕ್ಷ ರೂ. ಪಾವತಿಸಬೇಕಿದೆ. ಇನ್ನುಳಿದ ಕೋಟಾದ ಸೀಟುಗಳಿಗೂ ಶುಲ್ಕ ನಿಗದಿ ಮಾಡಲಾಗಿದೆ. ಸಂಪೂರ್ಣ ಶುಲ್ಕದ ಮಾಹಿತಿ ಇತರ ವಿವರಗಳನ್ನು http://kea.kar.nic.in ವೆಬ್‌ಸೈಟ್‌ನಲ್ಲಿ ನೋಡಬಹುದು ಎಂದು ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ.

ಇಲ್ಲೊಮ್ಮೆ ನೋಡಿ - ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ABOUT THE AUTHOR

...view details