ಬೆಂಗಳೂರು: ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಶೇ 30ರಷ್ಟು ಅರಣ್ಯ ನಿರ್ಮಾಣ ಮಾಡುವಂತೆ ಅರಣ್ಯ ಇಲಾಖೆ ಸಚಿವ ಉಮೇಶ್ ಕತ್ತಿಯವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಆದರೆ ಪ್ರತಿವರ್ಷ ರಾಜ್ಯದಲ್ಲಿ ಅರಣ್ಯ ಪ್ರದೇಶ ಕಡಿಮೆಯಾಗುತ್ತಿರುವುದು ಆತಂಕಕಾರಿ ವಿಚಾರ.
ವರ್ಷದಿಂದ ವರ್ಷಕ್ಕೆ ಕೆಲ ಜಿಲ್ಲೆಗಳಲ್ಲಿ ಅರಣ್ಯ ಪ್ರದೇಶ ಹೆಚ್ಚಳವಾಗುತ್ತಿದ್ದರೆ, ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಅರಣ್ಯ ಪ್ರದೇಶ ಇಳಿಕೆ ಕಾಣುತ್ತಿದೆ. ಹೀಗಾಗಿ ಸಚಿವ ಉಮೇಶ್ ಕತ್ತಿ ರಾಜ್ಯದ ಅರಣ್ಯ ಪ್ರದೇಶವನ್ನು ಹೆಚ್ಚಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಶೇ 30ರಷ್ಟು ಅರಣ್ಯ ಪ್ರದೇಶ ಇರಬೇಕು ಎಂದು ತಾಕೀತು ಮಾಡಿದ್ದಾರೆ.
ಇದನ್ನೂ ಓದಿ:Explaner: ಹೊಸ ಕೋವಿಡ್ ರೂಪಾಂತರದ ಬಗ್ಗೆ ನಿಮಗೆಷ್ಟು ಗೊತ್ತು.. ಏನಿದು ಒಮಿಕ್ರೋನ್?
ದಕ್ಷಿಣ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಶೇ 70ರಷ್ಟು ಅರಣ್ಯ ಇದ್ದರೆ, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶೇ 10 ಕ್ಕಿಂತ ಕಡಿಮೆ ಅರಣ್ಯ ಭೂಮಿ ಇರುವ ಬಗ್ಗೆ ಆತಂಕ ವ್ಯಕ್ತವಾಗಿದೆ. ಅದಲ್ಲದೇ, 2019-20 ಕ್ಕೆ ಹೋಲಿಸಿದರೆ 2020-21 ಸಾಲಿನಲ್ಲಿ ರಾಜ್ಯದ ಅರಣ್ಯ ಪ್ರದೇಶದಲ್ಲಿ ಕಡಿತವಾಗಿರುವುದು ಆತಂಕಕಾರಿ ವಿಚಾರವಾಗಿದೆ. ಹಲವು ಜಿಲ್ಲೆಗಳಲ್ಲಿ ಗಣನೀಯವಾಗಿ ಅರಣ್ಯ ಪ್ರದೇಶದಲ್ಲಿ ಇಳಿಕೆಯಾಗುತ್ತಿರುವುದು ಆತಂಕ ಮೂಡಿಸಿದೆ. ಹೀಗಾಗಿ, ಪ್ರತಿ ಜಿಲ್ಲೆಗಳಲ್ಲಿ ಕನಿಷ್ಠ 30ರಷ್ಟು ಅರಣ್ಯ ಪ್ರದೇಶ ಇರುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಲಾಗಿದೆ.
ಕಡಿಮೆ ಅರಣ್ಯ ಪ್ರದೇಶ ಇರುವ ಜಿಲ್ಲೆಗಳು ಯಾವುವು?: