ಬೆಂಗಳೂರು: ನೀತಿ ಆಯೋಗವು 2021ರ ರಫ್ತು ಸನ್ನದ್ಧತೆ ಸೂಚ್ಯಂಕ ಬಿಡುಗಡೆ ಮಾಡಿದ್ದು, ಕರ್ನಾಟಕ 3 ನೇ ಸ್ಥಾನ ಪಡೆದುಕೊಂಡಿದೆ. ಈ ಹಿಂದಿನ ರಫ್ತು ಸನ್ನದ್ಧತೆ ಸೂಚ್ಯಂಕದಲ್ಲಿ 9 ಸ್ಥಾನದಲ್ಲಿದ್ದ ಕರ್ನಾಟಕ ಈ ಬಾರಿ 3 ಸ್ಥಾನಕ್ಕೇರಿರುವುದು ವಿಶೇಷವಾಗಿದೆ.
ರಫ್ತು ಸನ್ನದ್ಧತೆ ಸೂಚ್ಯಂಕವು ರಾಜ್ಯಗಳ ರಫ್ತು ಸಾಮರ್ಥ್ಯ ಮತ್ತು ಕಾರ್ಯಕ್ಷಮತೆಗೆ ಸಂಬಂಧಿಸಿದಂತೆ ಸನ್ನದ್ಧತೆಯನ್ನು ನಿರ್ಣಯಿಸುತ್ತದೆ. ಗುಜರಾತ್, ಮಹಾರಾಷ್ಟ್ರ ಮೊದಲ ಹಾಗೂ ಎರಡನೇ ಸ್ಥಾನಗಳಲ್ಲಿದ್ದರೆ, ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ತಮಿಳುನಾಡು, ಹರಿಯಾಣ ನಂತರದ ಸ್ಥಾನಗಳಲ್ಲಿವೆ.