ಬೆಂಗಳೂರು :ಈ ಬಾರಿ ವಿಶೇಷ ಕಾಳಜಿಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ರಾಜ್ಯ ಸರ್ಕಾರ ನಡೆಸುತ್ತಿದೆ. ಇದಕ್ಕಾಗಿ 1,19,469 ಮಂದಿಯನ್ನು ನಿಯೋಜಿಸಿದೆ. ಈ ಬಾರಿಯ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಹೊಸ ಮಾದರಿಯಲ್ಲಿ ಉತ್ತರ ಬರೆಯಲಿದ್ದಾರೆ. ಒಟ್ಟು 8.75 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.
6 ಸಾವಿರಕ್ಕೂ ಅಧಿಕ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. 4,884 ಸರ್ಕಾರಿ, 1,831 ಖಾಸಗಿ, 1,294 ಅನುದಾನಿತ, 1,759 ಅನುದಾನರಹಿತ ಶಾಲೆಗಳ ಪರೀಕ್ಷಾ ಕೇಂದ್ರಗಳಿವೆ. ಇದರಲ್ಲಿ ಸಾಮಾನ್ಯ ಪರೀಕ್ಷಾ ಕೇಂದ್ರಗಳು 4,708, ಖಾಸಗಿ ಪರೀಕ್ಷಾ ಕೇಂದ್ರಗಳು 176, ಕ್ಲಸ್ಟರ್ ಪರೀಕ್ಷಾ ಕೇಂದ್ರಗಳು 2,166 ಹಾಗೂ 2, 542 ನಾನ್‍ಕ್ಲಸ್ಟರ್ ಪರೀಕ್ಷಾ ಕೇಂದ್ರಗಳಾಗಿವೆ.
8 ಲಕ್ಷ 76 ಸಾವಿರದ 581 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, 3,51,303 ಸರ್ಕಾರಿ, 2,35,908 ಅನುದಾನಿತ ಹಾಗೂ 2,89,370 ಅನುದಾನರಹಿತ ಅಭ್ಯರ್ಥಿಗಳಿದ್ದಾರೆ. ಒಟ್ಟು 73,066 ಕೊಠಡಿಗಳನ್ನು ಪರೀಕ್ಷೆಗೆ ತೆಗೆದುಕೊಳ್ಳಲಾಗಿದೆ.
4,884 ಮುಖ್ಯ ಅಧೀಕ್ಷಕರನ್ನು ನಿಯೋಜಿಸಲಾಗಿದೆ. 80,389 ಕೊಠಡಿ ಮೇಲ್ವಿಚಾರಕರು, 4,884 ಸ್ಥಾನಿಕ ಜಾಗೃತ ದಳದವರನ್ನು ಬಳಸಿಕೊಳ್ಳಲಾಗುತ್ತಿದೆ. ಜೊತೆಗೆ ಆಶಾ ಕಾರ್ಯಕರ್ತೆಯರು, ಆರಕ್ಷಕರಗಳನ್ನೂ ನಿಯೋಜಿಸಲಾಗಿದೆ.
8,76,581 ವಿದ್ಯಾರ್ಥಿಗಳ ಪೈಕಿ, 4,72,643 ಬಾಲಕರು, 4,03,938 ವಿದ್ಯಾರ್ಥಿನಿಯರಿದ್ದಾರೆ. ಅದರಲ್ಲಿ 7,83,955 ಹೊಸ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆ ಎದುರಿಸುತ್ತಿರುವ ವಿದ್ಯಾರ್ಥಿಗಳ ಆರೋಗ್ಯ ಹಿತದೃಷ್ಟಿಯಿಂದ ಸರ್ಕಾರ ಹಿಂದೆಂದಿಗಿಂತಲೂ ಕೋವಿಡ್ ಕ್ರಮಗಳನ್ನು ಕೈಗೊಂಡಿದೆ.