ಬೆಂಗಳೂರು:ರಾಜ್ಯದಲ್ಲಿ ಮುಂದಿನ ಎರಡು ವಾರ ವೀಕೆಂಡ್ ಕರ್ಫ್ಯೂ, ಸಿನಿಮಾ, ಮಾಲ್ ಸೇರಿ ಎಲ್ಲಾ ರೀತಿಯ ವಾಣಿಜ್ಯ ಚಟುವಟಿಕೆಗೆ ಶೇ.50 ರ ಮಿತಿ ಜಾರಿಗೊಳಿಸುವ ಹಾಗೂ ಬೆಂಗಳೂರಿಗೆ ಸೀಮಿತವಾಗಿ 10 ಮತ್ತು 12 ನೇ ತರಗತಿ ಹೊರತುಪಡಿಸಿ ಇತರ ಎಲ್ಲಾ ತರಗತಿಗಳ ಆಫ್ ಲೈನ್ ಕ್ಲಾಸ್ ಎರಡು ವಾರ ರದ್ದುಗೊಳಿಸವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಉನ್ನತಮಟ್ಟದ ಸಭೆ ನಂತರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಬೆಂಗಳೂರಿನಲ್ಲಿ 10 ಮತ್ತು 12ನೇ ತರಗತಿ ಹೊರತುಪಡಿಸಿ ಉಳಿದ ಎಲ್ಲಾ ಆಫ್ಲೈನ್ ತರಗತಿ ಮುಚ್ಚಲು ತೀರ್ಮಾನ ತೆಗೆದುಕೊಳ್ಳಲಾಗಿದೆ, ನಾಳೆ ರಾತ್ರಿ 10 ಗಂಟೆಗೆ ಹೊಸ ಕೊರೊನಾ ನಿಯಮ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.
ಎರಡು ವಾರ ನೈಟ್ ಕರ್ಫ್ಯೂ
ಎರಡು ವಾರಕ್ಕೆ ಅನ್ವಯವಾಗುವಂತೆ ರಾಜ್ಯಾದ್ಯಂತ ಶುಕ್ರವಾರ ರಾತ್ರಿ 10ರಿಂದ ಸೋಮವಾರ ಬೆಳಗ್ಗೆ 5:00 ವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದ್ದು, ಆಹಾರ, ಹಾಲು, ತರಕಾರಿ, ಔಷಧಿ, ಅಗತ್ಯ ವಸ್ತುಗಳು, ಹೋಟೆಲ್ಗಳಲ್ಲಿ ಪಾರ್ಸೆಲ್ ಸೇವೆ ಮಾತ್ರ ಇರಲಿದೆ. ನೈಟ್ ಕರ್ಫ್ಯೂ ಮುಂದಿನ ಎರಡು ವಾರ ಮುಂದುವರಿಸಲು ನಿರ್ಧರಿಸಲಾಗಿದೆ.
ಶೇಕಡಾ 50ರಷ್ಟು ಮಿತಿ
ಸರ್ಕಾರಿ ಕಚೇರಿಗಳು, ಮಾಲ್ಗಳಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ನಿಯಮ ಅನುಸರಿಸಲು ತೀರ್ಮಾನಿಸಿದೆ. ಅದರಂತೆ ಚಿತ್ರಮಂದಿರ, ಪಬ್, ರೆಸ್ಟೋರೆಂಟ್, ಮಾಲ್ ಸೇರಿದಂತೆ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಶೇಕಡ 50ರಷ್ಟು ಮಂದಿಗೆ ಸೀಮಿತಗೊಳಿಸಿ ನಿರ್ಬಂಧ ವಿಧಿಸಲಾಗಿದೆ. ಈ ಮೇಲಿನ ಸ್ಥಳಗಳಿಗೆ ಭೇಟಿ ನೀಡುವವರಿಗೆ ಕಡ್ಡಾಯವಾಗಿ ಎರಡು ಡೋಸ್ ವ್ಯಾಕ್ಸಿನ್ ಪಡೆದಿರಬೇಕು. ಮದುವೆ ಸಮಾರಂಭ ಹೊರಾಂಗಣದಲ್ಲಿ ಇದ್ದರೆ 200 ಜನ, ಒಳಾಂಗಣದಲ್ಲಿದ್ದರೆ ನೂರು ಜನರಿಗೆ ಮಾತ್ರ ಅವಕಾಶ. ಜೊತೆಗೆ ಇಲ್ಲಿಯೂ ಕೂಡ 2 ಡೋಸ್ ಲಸಿಕೆ ಕಡ್ಡಾಯಗೊಳಿಸಲಾಗಿದೆ.
ರಾಜ್ಯಕ್ಕೆ ಆಗಮಿಸುವವರಿಗೆ ನೆಗೆಟಿವ್ ವರದಿ ಕಡ್ಡಾಯ: