ಬೆಂಗಳೂರು:ಇಂದಿನಿಂದ ಮೂರು ದಿನಗಳವರೆಗೆ ಕಾರ್ಮಿಕರಿಗೆ ತಮ್ಮೂರುಗಳಿಗೆ ಹೋಗಲು ಉಚಿತ ಪ್ರಯಾಣ ವ್ಯವಸ್ಥೆ ಮಾಡಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಊರುಗಳಿಗೆ ತೆರಳೋ ವಲಸಿಗರಿಗೆ ವ್ಯವಸ್ಥೆ: 3 ದಿನದಲ್ಲಿ ಹೊರಟ್ರೆ ಕೆಎಸ್ಆರ್ಟಿಸಿ ಪ್ರಯಾಣ ಫ್ರೀ
ರಾಜ್ಯದ ವಿವಿಧೆಡೆ ಸಿಲುಕಿರುವ ವಲಸಿಗರು ತಮ್ಮ ತಮ್ಮ ಊರುಗಳಿಗೆ ತೆರಳಲು ರಾಜ್ಯ ಸರ್ಕಾರ ಅನುವು ಮಾಡಿಕೊಟ್ಟಿದೆ. ಕೆಎಸ್ಆರ್ಟಿಸಿಯಲ್ಲಿ ಪ್ರಯಾಣಿಸುವವರ ಪ್ರಯಾಣ ಶುಲ್ಕವನ್ನು ಸರ್ಕಾರವೇ ಭರಿಸಲಿದೆ.
ವಲಸಿಗರು
ಬಡ ಕೂಲಿ ಕಾರ್ಮಿಕರ ಪರಿಸ್ಥಿತಿಯನ್ನು ಗಮನಿಸಿ ಇಂದಿನಿಂದ 3 ದಿನಗಳವರೆಗೆ ಜಿಲ್ಲಾ ಕೇಂದ್ರಗಳಿಂದ ಮತ್ತು ರಾಜಧಾನಿ ಬೆಂಗಳೂರಿನಿಂದ ಕರ್ನಾಟಕದಲ್ಲಿನ ತಮ್ಮ ತಮ್ಮ ಊರುಗಳಿಗೆ ಹೋಗುವ ಎಲ್ಲರಿಗೂ ಉಚಿತವಾಗಿ ಕೆಎಸ್ಆರ್ಟಿಸಿ ಬಸ್ಗಳಲ್ಲಿ ತೆರಳಲು ಅನುವು ಮಾಡಿಕೊಡಲಾಗಿದೆ.
ಇದರ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ನನ್ನ ಕಳಕಳಿಯ ಮನವಿ ಯಾವುದೇ ಬಸ್ ನಿಲ್ಧಾಣಗಳಲ್ಲಿ ಯಾರೂ ನೂಕುನುಗ್ಗಲು ಮಾಡಬಾರದು. ಜನರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಸಿಎಂ ಬಿಎಸ್ವೈ ಮನವಿ ಮಾಡಿದ್ದಾರೆ.