ಕೋವಿಡ್ ಕರ್ತವ್ಯ: ಸಿಬ್ಬಂದಿಗೆ ರಿಸ್ಕ್ ಭತ್ಯೆ ನೀಡಲು ಸರ್ಕಾರ ಆದೇಶ - karnataka corona update
ಕೋವಿಡ್ ಕರ್ತವ್ಯ ನಿರ್ವಹಿಸುತ್ತಿರುವ ತಜ್ಞರು, ವೈದ್ಯರು, ಸಿಬ್ಬಂದಿ ಹಾಗೂ ಸ್ಟಾಫ್ ನರ್ಸ್ಗಳಿಗೆ ಏ.1 ರಿಂದ ಮುಂದಿನ ಆರು ತಿಂಗಳವರೆಗೆ ಅಥವಾ ಕೋವಿಡ್ ಪರಿಸ್ಥಿತಿ ಸುಧಾರಿಸುವವರೆಗೆ ಯಾವುದು ಮೊದಲೋ ಅಲ್ಲಿಯವರೆಗೆ ರಿಸ್ಕ್ ಭತ್ಯೆ ನೀಡಲು ಆದೇಶಿಸಲಾಗಿದೆ.
ಕೋವಿಡ್ ಕರ್ತವ್ಯ
ಬೆಂಗಳೂರು:ಕೋವಿಡ್ ಕರ್ತವ್ಯ ನಿರ್ವಹಿಸುತ್ತಿರುವ ತಜ್ಞರು, ವೈದ್ಯರು, ಸಿಬ್ಬಂದಿಗೆ, ಸ್ಟಾಫ್ ನರ್ಸ್ಗಳಿಗೆ ಆರು ತಿಂಗಳ ಅವಧಿಗೆ ರಿಸ್ಕ್ ಭತ್ಯೆ ನೀಡಲು ಸರ್ಕಾರ ನಿರ್ಧರಿಸಿದೆ.
ಅದರಂತೆ ಕೋವಿಡ್ ಕರ್ತವ್ಯ ನಿರ್ವಹಿಸುತ್ತಿರುವ ತಜ್ಞರು, ವೈದ್ಯರು, ಸಿಬ್ಬಂದಿ ಹಾಗೂ ಸ್ಟಾಫ್ ನರ್ಸ್ಗಳಿಗೆ ಏ.1 ರಿಂದ ಮುಂದಿನ ಆರು ತಿಂಗಳವರೆಗೆ ಅಥವಾ ಕೋವಿಡ್ ಪರಿಸ್ಥಿತಿ ಸುಧಾರಿಸುವವರೆಗೆ ಯಾವುದು ಮೊದಲೋ ಅಲ್ಲಿಯವರೆಗೆ ರಿಸ್ಕ್ ಭತ್ಯೆ ನೀಡಲು ಆದೇಶಿಸಲಾಗಿದೆ.
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ತಜ್ಞರು, ಎಂಬಿಬಿಎಸ್ ವೈದ್ಯರು, ಆಯುಷ್ ವೈದ್ಯರುಗಳಿಗೆ 10,000 ರೂ., ಶುಶ್ರೂಷಕರು, ಎ.ಎನ್.ಎಂ, ಪ್ರಯೋಗಶಾಲಾ ತಂತ್ರಜ್ಞರು, ಫಾರ್ಮಾಸಿಸ್ಟ್ಗಳಿಗೆ 5,000 ರೂ. ಕೋವಿಡ್ ರಿಸ್ಕ್ ಪ್ರೋತ್ಸಾಹಧನವನ್ನು 6 ತಿಂಗಳ ಅವಧಿಗೆ ನೀಡಲು ನಿರ್ಧರಿಸಲಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಯಡಿಯಲ್ಲಿ ಬರುವ ಆಸ್ಪತ್ರೆಗಳಲ್ಲಿನ ಕೋವಿಡ್ ಹೆಲ್ತ್ ಸೆಂಟರ್, ಕೋವಿಡ್ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್ಗಳಲ್ಲಿ ಕೋವಿಡ್-19ನ್ನು ನಿಯಂತ್ರಿಸುವ ಸಲುವಾಗಿ ಪಿಪಿಇ ಕಿಟ್ ಧರಿಸಿ ಕಾರ್ಯನಿರ್ವಹಿಸುತ್ತಿರುವ ಖಾಯಂ/ಗುತ್ತಿಗೆ/ಹೊರಗುತ್ತಿಗೆ ಶುಶ್ರೂಷಕರುಗಳಿಗೆ 5,000 ರೂ. ಕೋವಿಡ್ ರಿಸ್ಕ್ ಭತ್ಯೆ ನೀಡಲಾಗುತ್ತದೆ. ಇನ್ನು ಸ್ಟಾಪ್ ನರ್ಸ್ ಗಳಿಗೆ ಮುಂದಿನ ಆರು ತಿಂಗಳ ವರೆಗೆ 8,000 ರೂ. ಕೋವಿಡ್ ರಿಸ್ಕ್ ಭತ್ಯೆ ನೀಡಲು ಮಂಜೂರಾತಿ ನೀಡಿ ಆದೇಶಿಸಲಾಗಿದೆ.