ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶದಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಿಪಿಎಲ್ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರರಿಗೆ ಮಾಸಿಕ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲು ಆದೇಶಿಸಲಾಗಿದೆ. ಈ ಸಂಬಂಧ ಇಂಧನ ಇಲಾಖೆ ಆದೇಶ ಹೊರಡಿಸಿದ್ದು, ಮೇ 1 ರಿಂದ ಅನ್ವಯವಾಗುವಂತೆ ಉಚಿತ ವಿದ್ಯುತ್ ಸರಬರಾಜು ಮಾಡಲು ಸೂಚಿಸಲಾಗಿದೆ.
ಉಚಿತ ವಿದ್ಯುತ್ ಸರಬರಾಜು ಮಾಡಲು ವಿದ್ಯುತ್ ಸರಬರಾಜು ಕಂಪನಿಗಳು ಸಲ್ಲಿಸುವ ಅಂಕಿ ಅಂಶಗಳನ್ನು ಪರಿಗಣಿಸಬೇಕು. ಪ್ರತಿ ಸಾಲಿನಲ್ಲಿ ಸಚಿವ ಸಂಪುಟ ಅನುಮೋದಿಸಿರುವ ಪ್ರಕಾರವಾಗಿ ಒದಗಿಸಬೇಕಾದ ವಿದ್ಯುತ್ ಸಹಾಯ ಧನದ ಮೊತ್ತದ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಂಡ ನಂತರ ವಿದ್ಯುತ್ ಸರಬರಾಜು ಕಂಪನಿಗಳು ಸದರಿ ಮೊತ್ತದ ವಿವರಗಳೊಂದಿಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಕ ಆಯೋಗಕ್ಕೆ ತಮ್ಮ ಪ್ರಸ್ತಾವನೆಯನ್ನು ಸಲ್ಲಿಸಬೇಕು.