ಕರ್ನಾಟಕ

karnataka

ETV Bharat / city

ಹೆದ್ದಾರಿ ಬದಿ ಕಟ್ಟಡ ನಿರ್ಮಾಣಕ್ಕೆ ನಿಯಮ ಜಾರಿ: ಸಚಿವ ಸಿ.ಸಿ.ಪಾಟೀಲ್

ಹೆದ್ದಾರಿ ಅಕ್ಕಪಕ್ಕ ಕಟ್ಟಡ ನಿರ್ಮಾಣ ಮಾಡುವಾಗ ಕನಿಷ್ಠ ಎಷ್ಟು ಪ್ರಮಾಣದ ಅಂತರ ಕಾಯ್ದುಕೊಳ್ಳಬೇಕೆಂಬುದಕ್ಕೆ ನಿಯಮ ಜಾರಿಗೆ ತರಲಾಗಿದೆ ಎಂದು ಸಚಿವ ಸಿ.ಸಿ.ಪಾಟೀಲ್ ತಿಳಿಸಿದ್ದಾರೆ.

Minister CC Patil
ಸಿ.ಸಿ.ಪಾಟೀಲ್

By

Published : Aug 3, 2022, 2:46 PM IST

ಬೆಂಗಳೂರು: ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳ ಅಕ್ಕಪಕ್ಕ ಅನಧಿಕೃತ ಕಟ್ಟಡಗಳನ್ನು ನಿರ್ಮಿಸುವುದನ್ನು ತಡೆಗಟ್ಟಲು ಲೋಕೋಪಯೋಗಿ ಇಲಾಖೆಯಿಂದ ಸ್ಪಷ್ಟ ನಿಯಮ ಜಾರಿಗೆ ತರಲಾಗಿದೆ ಎಂದು ಸಚಿವ ಸಿ.ಸಿ.ಪಾಟೀಲ್ ತಿಳಿಸಿದ್ದಾರೆ. ಈ ನಿಬಂಧನೆಗಳನ್ನು ಪಾಲಿಸುವುದರಿಂದ ರಸ್ತೆಗಳಲ್ಲಿ ಅತಿಕ್ರಮಣ ತಡೆಯಲು ಸಹಾಯಕವಾಗುತ್ತದೆ. ವಾಹನ ಸಂಚಾರ ಸುಗಮವಾಗುವುದಲ್ಲದೇ, ಅಪಘಾತಗಳ ಪ್ರಮಾಣವನ್ನೂ ಕಡಿಮೆಗೊಳಿಸಲು ಸಾಧ್ಯವಾಗಲಿದೆ ಎಂದು ಸಚಿವರು ಹೇಳಿದ್ದಾರೆ.

ಈ ನಿಯಮದನ್ವಯ ರಾಜ್ಯ ಹೆದ್ದಾರಿಗಳ ಮಧ್ಯಭಾಗದಿಂದ 40 ಮೀಟರ್ ಅಂತರದವರೆಗೆ ಯಾವುದೇ ಕಟ್ಟಡ ಅಥವಾ ಅಂಗಡಿಗಳನ್ನು ನಿರ್ಮಿಸುವಂತಿಲ್ಲ. ಜಿಲ್ಲಾ ಮುಖ್ಯರಸ್ತೆಗಳ ಮಧ್ಯಭಾಗದಿಂದ 25 ಮೀಟರ್ ಅಂತರದವರೆಗೆ ಕಟ್ಟಡ ನಿರ್ಮಿಸುವುದಕ್ಕೆ ಅವಕಾಶವಿಲ್ಲ. ಅಲ್ಲದೇ, ಸಿಟಿ ಕಾರ್ಪೊರೇಷನ್, ಸಿಟಿ ಮುನ್ಸಿಪಲ್ ಕೌನ್ಸಿಲ್, ಟೌನ್ ಮುನ್ಸಿಪಲ್ ಕೌನ್ಸಿಲ್, ಪಟ್ಟಣ ಪಂಚಾಯತಿ ಮತ್ತು ಗ್ರಾಮ ಪಂಚಾಯತಿ ಪರಿಮಿತಿಗಳಲ್ಲಿ ಈ ಅಂತರವನ್ನು ರಾಜ್ಯ ಹೆದ್ದಾರಿಯ ದಾಖಲಿತ ರಸ್ತೆ ಭೂಗಡಿಯ ಅಂಚಿನಿಂದ ಕನಿಷ್ಠ 6 ಮೀಟರ್ ಅಂತರ ಕಾಯ್ದುಕೊಳ್ಳಬೇಕು ಹಾಗೂ ಸಿಟಿ ಕಾರ್ಪೊರೇಷನ್ ಪರಿಮಿತಿಯಿಂದ 15 ಕಿ.ಮೀ. ದೂರದವರೆಗೆ 12 ಮೀಟರ್ ಅಂತರ ಪಾಲಿಸುವುದು ಕಡ್ಡಾಯವಾಗಿದೆ.

ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರರುಗಳನ್ನು ಹೆದ್ದಾರಿ ಪ್ರಾಧಿಕಾರಿ ಎಂದು ಘೋಷಿಸಲಾಗಿದ್ದು, ರಸ್ತೆಯಿಂದ ಕಟ್ಟಡಗಳ ಅಂತರ ನಿಗದಿಪಡಿಸುವುದು ಹಾಗೂ ರಸ್ತೆ ಗಡಿಯನ್ನು ನಿಗದಿಪಡಿಸುವುದು ಅವರ ಜವಾಬ್ಧಾರಿ ಎಂದು ಸಿ.ಸಿ.ಪಾಟೀಲ್ ತಿಳಿಸಿದ್ದಾರೆ.

ಇದನ್ನೂ ಓದಿ:ನಿಮ್ಮ ಹೆಬ್ಬೆರಳ ತುದಿಯಲ್ಲಿ ಕೂರುತ್ತೆ ಈ ಟೆಡ್ಡಿ ಬೇರ್.. ಇದು ಟೈನಿಟೆಡ್

ABOUT THE AUTHOR

...view details