ಬೆಂಗಳೂರು:ರಾಜ್ಯ ಸರ್ಕಾರ ಕೋವಿಡ್, ಒಮಿಕ್ರಾನ್ ಹೆಚ್ಚಳ ಹಿನ್ನೆಲೆ ಕ್ರಿಸ್ಮಸ್ಸಂಭ್ರಮಾಚರಣೆಗೆ ಕೆಲವೊಂದು ನಿರ್ಬಂಧ ಹೇರಿದೆ. ಈ ಹಿಂದೆ ಒಮಿಕ್ರಾನ್ ಕೋವಿಡ್ ಸಂಬಂಧ ಸಿಎಂ ಸುವರ್ಣಸೌಧಲ್ಲಿ ಸಭೆ ನಡೆಸಿ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿದರು.
ಸಭೆ ಬಳಿಕ ಮಾತನಾಡಿದ ಸಿಎಂ, ಬಹಿರಂಗ ಸಂಭ್ರಮಾಚರಣೆಗೆ ನಿರ್ಬಂಧ ಹೇರಲಾಗಿದೆ ಎಂದರು. ಇದಕ್ಕೆ ಜನರು ಸಹಕರಿಸಬೇಕು. ಕ್ರಿಸ್ ಮಸ್ ಆಚರಣೆಗೆ ಚರ್ಚ್ಗೆ ಹೋಗ್ತಾರೆ. ಇದಕ್ಕೆ ಯಾವುದೇ ನಿರ್ಬಂಧ ಇಲ್ಲ. ರೆಸ್ಟೋರೆಂಟ್ ಹಾಗೂ ಕ್ಲಬ್ಗಳಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗೆ ಡಬಲ್ ಡೋಸ್ ಲಸಿಕೆ ಕಡ್ಡಾಯವಾಗಿದೆ ಎಂದು ವಿವರಿಸಿದರು.