ಬೆಂಗಳೂರು:ನಾಯಕತ್ವ ಬದಲಾವಣೆಯ ಕೂಗಿನ ಮಧ್ಯೆಯೇ ಸರ್ಕಾರ ಕೆಲ ಅಧಿಕಾರಿಗಳ ವರ್ಗಾವಣೆ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ, 43 ತಹಶೀಲ್ದಾರ್ ಹಾಗೂ ನಾಲ್ವರು ಕೆಎಎಸ್ ಅಧಿಕಾರಿಗಳನ್ನು ವರ್ಗಾಯಿಸಿ ಆದೇಶ ಹೊರಡಿಸಿದೆ.
ಸಿಎಂ ಬದಲಾವಣೆ ಚರ್ಚೆ ಮಧ್ಯೆ KAS, IPS ಅಧಿಕಾರಿಗಳ ವರ್ಗಾವಣೆ - ಕೆಎಎಸ್, ಐಎಎಸ್ ಅಧಿಕಾರಿಗಳ ವರ್ಗಾವಣೆ
ಸಿಎಂ ಬದಲಾವಣೆ ಚರ್ಚೆಯ ಮಧ್ಯೆ ಕೆಲ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆಗೊಳಿಸಿ ಆದೇಶಿಸಿದೆ.
transfer
ಐಪಿಎಸ್ ಅಧಿಕಾರಿ ಅನುಪಮ್ ಅಗರ್ವಾಲ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ. ಇನ್ನು ಐಪಿಎಸ್ ಅಧಿಕಾರಿಗಳಾದ ವರ್ತಿಕಾ ಕಟಿಯಾರ್, ಜಿ.ಸಂಗೀತರ ಈ ಹಿಂದಿನ ವರ್ಗಾವಣೆ ಆದೇಶವನ್ನು ರದ್ದುಗೊಳಿಸಲಾಗಿದೆ.